Sunday, May 19, 2024
Homeಕರಾವಳಿಮಂಗಳೂರಿನಲ್ಲಿ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸಚಿವ ಆನಂದ್ ಸಿಂಗ್ ತರಾಟೆ

ಮಂಗಳೂರಿನಲ್ಲಿ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸಚಿವ ಆನಂದ್ ಸಿಂಗ್ ತರಾಟೆ

spot_img
- Advertisement -
- Advertisement -

ಮಂಗಳೂರು: ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸಚಿವ ಆನಂದ್ ಸಿಂಗ್ ತರಾಟೆಗೆ ತೆಗೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಡೆದ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ತರಾಟೆಗೆತ್ತಿಕೊಂಡಿದ್ದಾರೆ.

ಪ್ರವಾಸೋದ್ಯಮ ಇಲಾಖೆ ಅನುದಾನದಡಿ ಯಾತ್ರಿ ನಿವಾಸ ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳುವಾಗ ಇಲಾಖೆ ಹೇಳಿದ ಶೈಲಿಯಲ್ಲಿ ಕಟ್ಟಡ ನಿರ್ಮಾಣ ಮಾಡಬೇಕು, ಇಲ್ಲದಿದ್ದರೆ ಅನುದಾನವನ್ನು ತಡೆ ಹಿಡಿಯಲಾಗುತ್ತಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಸಚಿವರ ಗಮನಕ್ಕೆ ತಂದರು.

ಈ ವೇಳೆ ಅಧಿಕಾರಿಗಳ ನಡೆಗೆ ಬೇಸರ ವ್ಯಕ್ತಪಡಿಸಿದ ಸಚಿವರು, ಅನುದಾನ ನೀಡಿ ಕಟ್ಟಡ ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕು, ಇದೇ ಶೈಲಿಯಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡಬೇಕು ಅಷ್ಟೇ. ಈ ರೀತಿ ಎಲ್ಲಾ ಯಾರು ಆದೇಶ ಮಾಡಿದ್ದಾರೆ ಎಂದು ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈ ಹಿಂದೆ ಆದೇಶ ಆಗಿದೆ ಎಂದು ಅಧಿಕಾರಿಗಳು ಸಬೂಬು ಹೇಳಿದಾಗ ಕೂಡಲೇ ಅಂತಹ ಆದೇಶವನ್ನು ಹಿಂಪಡೆಯಬೇಕು ಎಂದು ಸಚಿವರು ಸೂಚಿಸಿದರು‌.

- Advertisement -
spot_img

Latest News

error: Content is protected !!