Thursday, June 4, 2026
Homeಚಿಕ್ಕಮಗಳೂರುಚಿಕ್ಕಮಗಳೂರು : ದತ್ತಪೀಠದಲ್ಲಿ 100 ಅಡಿ ಕೆಳಕ್ಕೆ ಉರುಳಿ ಬಿದ್ದ ಪ್ರವಾಸಿ ಬಸ್ : ಬಾಲಕ...

ಚಿಕ್ಕಮಗಳೂರು : ದತ್ತಪೀಠದಲ್ಲಿ 100 ಅಡಿ ಕೆಳಕ್ಕೆ ಉರುಳಿ ಬಿದ್ದ ಪ್ರವಾಸಿ ಬಸ್ : ಬಾಲಕ ಸಾವು, ಹಲವರಿಗೆ ಗಾಯ

- Advertisement -
- Advertisement -

ಚಿಕ್ಕಮಗಳೂರು : 100 ಅಡಿ ಕೆಳಕ್ಕೆ ಪ್ರವಾಸಿ ಬಸ್ ಉರುಳಿ ಬಿದ್ದ ಘಟನೆ ದತ್ತಪೀಠದಲ್ಲಿ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಬಾಲಕನೊಬ್ಬ ಸಾವನ್ನಪ್ಪಿದ್ದಾನೆ.

ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕೆಳಕ್ಕೆ ಉರುಳಿ ಬಿದ್ದಿದೆ ಬಸ್ .ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ಪ್ರವಾಸಿಗರು ಬಂದಿದ್ದರು.ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದರು. ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ಬಸ್ ಪಲ್ಟಿಯಾಗಿದೆ.

23 ಜನರಿಗೆ ಸಣ್ಣಪುಟ್ಟ ಗಾಯ ಹಾಗೂ 6 ಜನರಿಗೆ ಗಂಭೀರ ಗಾಯಗಳಾಗಿವೆ.ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisement -

Latest News

error: Content is protected !!