- Advertisement -
- Advertisement -
ಮಡಿಕೇರಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ಕೊಡಗು ಜಿಲ್ಲೆಗೆ ಪ್ರವಾಸಕ್ಕೆಂದು ತೆರಳಿದ್ದ ವೇಳೆ ಪ್ರವಾಸಿಗರ ಮೇಲೆ ಹಲ್ಲೆ ನಡೆದಿದೆ.
ಪುತ್ತೂರಿನಿಂದ ಪ್ರವಾಸಕ್ಕೆ ತೆರಳಿದ್ದ ಕುಟುಂಬದ ಮೇಲೆ ಸೋಮವಾರಪೇಟೆ ತಾಲ್ಲೂಕಿನ ಕೋಟೆಬೆಟ್ಟ ರಸ್ತೆಯಲ್ಲಿ ಹಲ್ಲೆ ನಡೆದಿದೆ.
ಬೈಕ್‌ನಲ್ಲಿ ಬಂದಿದ್ದ ಇಬ್ಬರು ಯುವಕರಿಂದ ಈ ಕೃತ್ಯ ನಡೆದಿದ್ದು, ಎಳೆದಾಡಿ ಹೆಲ್ಮೆಟ್ ನಲ್ಲೇ ಹೊಡೆದು ಹಲ್ಲೆ ನಡೆಸಿದ್ದಾರೆ.
ಯುವಕರು ಪ್ರವಾಸಿಗರ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯವನ್ನು ಸ್ಥಳದಲ್ಲಿದ್ದ ಇತರ ಸ್ಥಳೀಯರು ಮೊಬೈಲ್ ಪೋನ್ ನಲ್ಲಿ ಚಿತ್ರೀಕರಿಸಿದ್ದು, ಹಲ್ಲೆಯ ಬಳಿಕ ಬೈಕ್ ಅನ್ನು ಸ್ಥಳದಲ್ಲೇ ಬಿಟ್ಟು ಯುವಕರು ಪರಾರಿಯಾಗಿದ್ದಾರೆ.
ಹಲ್ಲೆಗೊಳಗಾದ ಪ್ರವಾಸಿಗರು ಮಾದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
- Advertisement -