Friday, June 5, 2026
Homeತಾಜಾ ಸುದ್ದಿವಿಟ್ಲ: ಪಟ್ಟಣ ಪಂಚಾಯತ್ ಸಿಬ್ಬಂದಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನ

ವಿಟ್ಲ: ಪಟ್ಟಣ ಪಂಚಾಯತ್ ಸಿಬ್ಬಂದಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನ

- Advertisement -
- Advertisement -

ವಿಟ್ಲ: ಪಟ್ಟಣ ಪಂಚಾಯತ್ ಸಿಬ್ಬಂದಿಯೊಬ್ಬರು ಡೆತ್ನೋಟ್ ಬರೆದಿಟ್ಟು, ಬಂಟ್ವಾಳದ ನೇತ್ರಾವತಿ ಸೇತುವೆಯಿಂದ ಹಾರಲು ಯತ್ನಿಸುತ್ತಿದ್ದ ವೇಳೆ ಸ್ಥಳೀಯರು ರಕ್ಷಣೆ ಮಾಡಿದ ಘಟನೆ ನಡೆದಿದ್ದು, ಸ್ಥಳೀಯರು ಆತನನ್ನು ಸೇತುವೆಯ ಬಳಿ ಕಂಡು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ರಾಜೇಶ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದವರು.

ವಿಟ್ಲದ ಮಂಗಳಪದವು ಎಂಬಲ್ಲಿಯ ವ್ಯಕ್ತಿಯೊಬ್ಬರಿಗೆ ಮನೆ ಮಂಜೂರಾತಿ ವಿಚಾರದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರೊಬ್ಬರು ರಾಜೇಶ್ ರವರ ಮೇಲೆ ಲಂಚ ಕೇಳಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿದರು. ಈ ಬಗ್ಗೆ ವರದಿ ಪ್ರಕಟಗೊಂಡಿತ್ತು.

ರಾಜೇಶ್ ಕೆಲವರಿಗೆ ವಾಟ್ಸಾಪ್ ನಲ್ಲಿ ವಾಯ್ಸ್ ಮೆಸೇಜ್ ಕಳುಹಿಸಿದ್ದು, ನನ್ನ ಬಗ್ಗೆ ಸುಳ್ಳು ಆರೋಪ ಮಾಡಿದ್ದು, ಇದರಿಂದ ಮಾನಸಿಕವಾಗಿ ಮನನೊಂದಿರುತ್ತೇನೆ. ಆದುರಿಂದ ನಾನು ಆತ್ಮಹತ್ಯೆ ಮಾಡುತ್ತೇನೆ ಎಂದು ಸಂದೇಶ ಕಳುಹಿಸಿದ್ದು, ಬಳಿಕ ಡೆತ್ ನೋಟು ಬರದಿದ್ದು, ಅದರಲ್ಲಿಯೂ ಕೂಡಾ ಇದೇ ವಿಚಾರವನ್ನು ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!