Friday, November 6, 2026
Homeಕರಾವಳಿಟ್ರಾಫಿಕ್ ಪೊಲೀಸರ ವಿರುದ್ಧ ಲಂಚಕ್ಕೆ ಬೇಡಿಕೆ ಆರೋಪ; ₹200 ನೀಡುವಂತೆ ಒತ್ತಡ, ವಿಡಿಯೋ ಮಾಡುತ್ತಿದ್ದಂತೆ FIR...

ಟ್ರಾಫಿಕ್ ಪೊಲೀಸರ ವಿರುದ್ಧ ಲಂಚಕ್ಕೆ ಬೇಡಿಕೆ ಆರೋಪ; ₹200 ನೀಡುವಂತೆ ಒತ್ತಡ, ವಿಡಿಯೋ ಮಾಡುತ್ತಿದ್ದಂತೆ FIR ಬೆದರಿಕೆ!

- Advertisement -
- Advertisement -

ಮಂಗಳೂರು: ನಗರದ ಮಂಗಳೂರು–ನೇತ್ರಾವತಿ–ಮಂಗಳಾದೇವಿ ರಸ್ತೆಯಲ್ಲಿ ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ವಾಹನ ಸವಾರನಿಂದ ₹200 ಹಣ ನೀಡುವಂತೆ ಒತ್ತಾಯಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನವೆಂಬರ್ 5ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ವಾಹನದ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ತೋರಿಸಿದರೂ ಭೌತಿಕ ದಾಖಲೆಗಳನ್ನು ಹಾಜರುಪಡಿಸುವಂತೆ ಪೊಲೀಸ್ ಅಧಿಕಾರಿ ಒತ್ತಾಯಿಸಿದ್ದಾರೆ. ಬಳಿಕ ₹200 ಪಾವತಿಸುವಂತೆ ಒತ್ತಡ ಹೇರಿದ್ದಾರೆ ಎಂದು ವಾಹನ ಸವಾರ ದೂರಿದ್ದಾರೆ.

ಈ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಲು ಮುಂದಾದಾಗ, ಎಫ್‌ಐಆರ್ ದಾಖಲಿಸುವುದಾಗಿ ಹಾಗೂ ವಾಹನವನ್ನು ಜಪ್ತಿ ಮಾಡುವುದಾಗಿ ಅಧಿಕಾರಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೆ, ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯ ಸಮವಸ್ತ್ರದಲ್ಲಿ ಗುರುತಿನ ಬ್ಯಾಡ್ಜ್ ಕೂಡ ಇರಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಆರೋಪದ ಕುರಿತು ಮಂಗಳೂರು ನಗರ ಪೊಲೀಸ್ ಇಲಾಖೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!