Thursday, June 4, 2026
Homeಕರಾವಳಿಮಂಗಳೂರು: ಅಕ್ರಮ ಗಾಂಜಾ ಸಾಗಾಟ: ಮೂವರ ಬಂಧನ, 27 ಲಕ್ಷ ರೂ. ಮೌಲ್ಯದ ಗಾಂಜಾ ವಶ

ಮಂಗಳೂರು: ಅಕ್ರಮ ಗಾಂಜಾ ಸಾಗಾಟ: ಮೂವರ ಬಂಧನ, 27 ಲಕ್ಷ ರೂ. ಮೌಲ್ಯದ ಗಾಂಜಾ ವಶ

- Advertisement -
- Advertisement -

ಮಂಗಳೂರು: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ ಘಟನೆ ನೆತ್ತಿಲಪದವು ಎಂಬಲ್ಲಿ ನಡೆದಿದೆ.

ಮಂಜೇಶ್ವರದ ಹೊಸಬೆಟ್ಟು ಕಡಪುರಂ ನಿವಾಸಿ ಅಬೂಬಕ್ಕರ್ ಸಿದ್ದೀಕ್ ಅಲಿಯಾಸ್ ಹ್ಯಾರೀಸ್ (35), ಕುಂಬ್ಳೆ ಮಂಬ್ರಾನ್ ಗ್ರಾಮದ ಆರಿಕ್ಕಾಡಿ ಬೀರಂಟಿಕಾರ ನಿವಾಸಿ ಅಖಿಲ್ ಎಂ. (25), ಹಾಗೂ ಹೈದರ್ ಆಲಿ ಅಲಿಯಾಸ್ ಗಾಡಿ ಹೈದರ್ (39) ಬಂಧಿತರು. ಬಂಧಿತರಿಂದ 27 ಲಕ್ಷ ರೂ. ಮೌಲ್ಯದ ಗಾಂಜಾ ಸೇರಿದಂತೆ ಒಟ್ಟು 32 ಲಕ್ಷ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

- Advertisement -

Latest News

error: Content is protected !!