- Advertisement -
- Advertisement -
ಮಂಗಳೂರು; ರೈಲು ಡಿಕ್ಕಿ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ಶನಿವಾರ ತಡರಾತ್ರಿ ವೇಳೆ ನಡೆದಿದೆ.
ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ ಪುತ್ರ ಜಾಫರ್ (22) ಮೃತ ಯುವಕ. ಜಾಫರ್ ಶನಿವಾರ ಸಂಜೆ ವೇಳೆ ಮನೆಗೆ ಮರಳಲು ರೈಲ್ವೇ ಹಳಿಯನ್ನು ದಾಟುವ ಸಂದರ್ಭ ಅವರಿಗೆ ರೈಲು ಢಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇತ್ತೀಚೆಗಷ್ಟೇ ಮುಂಬೈನಿಂದ ಕೆಲಸ ಬಿಟ್ಟು ಊರಿಗೆ ಮರಳಿದ್ದ ಜಾಫರ್, ಫೆಬ್ರವರಿ 14 ರಂದು ಸೌದಿಗೆ ಉದ್ಯೋಗಕ್ಕಾಗಿ ತೆರಳಲು ಸಿದ್ಧತೆ ನಡೆಸಿದ್ದರು. ಈ ಬಗ್ಗೆ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -