ನವದೆಹಲಿ : ಲಾಕ್ ಡೌನ್ 3.0 ಮತ್ತೆ ಮುಂದುವರೆದಿದೆ. ಮೇ.3ರ ನಂತ್ರ ಮತ್ತೆ ಲಾಕ್ ಡೌನ್ ಎರಡು ವಾರಗಳ ಕಾಲ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಮೇ.17ರ ವರೆಗೆ ದೇಶಾದ್ಯಂತ ಎಲ್ಲಾ ರೀತಿಯ ರೈಲುಗಳ ಸಂಚಾರವನ್ನು ರದ್ದುಗೊಳಿಸಿ, ಕೇಂದ್ರ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವಂತ ಕೇಂದ್ರ ರೈಲ್ವೆ ಸಚಿವಾಲಯದ ಎಕ್ಸಿಕ್ಯೂಟಿವ್ ಡೈರೆಕ್ಟರ್ ರಾಜೇಂದ್ರ ದತ್ ಬಾಜ್ಪೈ, ಕೊರೋನೋ ಸೋಂಕು ನಿಯಂತ್ರಣಕ್ಕಾಗಿ ಕೇಂದ್ರ ಗೃಹ ಸಚಿವಾಲಯವು ಮೇ.17ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಎಲ್ಲಾ ರೀತಿಯ ಎಲ್ಲಾ ಪ್ರಯಾಣಿಕರ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಲಾಕ್ ಡೌನ್ ನಡುವೆಯೂ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರ ಅನುಕೂಲಕ್ಕಾಗಿ ಶ್ರಮಿಕ ವಿಶೇಷ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದು ಆಯಾ ರಾಜ್ಯ ಸರ್ಕಾರದ ಕೋರಿಕೆಯ ಮೇಲೆ ನಿಂತಿರುತ್ತದೆ. ಜೊತೆಗೆ ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿಯಂತೆ ಆಗಿದೆ ಎಂಬುದಾಗಿ ತಿಳಿಸಿದ್ದಾರೆ.