Saturday, June 13, 2026
Homeಕರಾವಳಿಮಂಗಳೂರಿನಲ್ಲಿ ಯುವಕನ ಮೇಲೆ ಮಂಗಳಮುಖಿಯರಿಂದ ಹಲ್ಲೆ

ಮಂಗಳೂರಿನಲ್ಲಿ ಯುವಕನ ಮೇಲೆ ಮಂಗಳಮುಖಿಯರಿಂದ ಹಲ್ಲೆ

- Advertisement -
- Advertisement -

ಮಂಗಳೂರು: ಯುವಕನ ಮೇಲೆ ಮಂಗಳಮುಖಿಯರು ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕುಂಟಿಕಾನ ರಾಷ್ಟ್ರೀಯ ಹೆದ್ದಾರಿಯ ಫ್ಲೈಒವರ್ ಕೆಳಗೆ ಅಮಾಯಕ ಯುವಕನೊಬ್ಬನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲವು ವರ್ಷಗಳಿಂದ ಇದೇ ಫ್ಲೈಒವರ್ ಕೆಳಗೆ ಸಂಜೆ ಆದ್ರೆ ಸಾಕು ಮಂಗಳಮುಖಿಯರು ಬೀಡು ಬಿಡುತ್ತಿದ್ದು ಇಬ್ಬರು ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು, ಇನ್ನು ಮುಂದೆ ಇಲ್ಲಿ ಅನೈತಿಕ ಚಟುವಟಿಕೆಗೆ ಅವಕಾಶ ನೀಡಬಾರದೆಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ಮತ್ತಿಬ್ಬರು ಮಂಗಳಮುಖಿಯರು ಸ್ಥಳಕ್ಕಾಗಮಿಸಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಮಾಹಿತಿ ಪಡೆದ ಉರ್ವ ಠಾಣಾ ಪೊಲೀಸರು ಬಂದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಈ ಘಟನೆ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!