Wednesday, July 15, 2026
Homeಕರಾವಳಿಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಯ ವರ್ಗಾವಣೆ

- Advertisement -
- Advertisement -

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಕರಾವಳಿಯಲ್ಲಿ ಕೋಮು ಸೌಹಾರ್ಧತೆಗೆ ಧಕ್ಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಗೃಹ ಇಲಾಖೆ, ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಕೋಮು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ವಿಶೇಷ ಕಾರ್ಯಪಡೆ ಕೂಡ ರಚನೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ನಡೆಯುತ್ತಿದೆ. ಇನ್ನೂ ನೂರಾರು ಸಂಖ್ಯೆಯಲ್ಲಿ ಸಿಬ್ಬಂದಿ ವರ್ಗಾವಣೆ ಸಾಧ್ಯತೆ ಇದೆ ಎನ್ನಲಾಗಿದೆ.

ಹಲವು ವರ್ಷಗಳಿಂದ ಒಂದೇ ಕಡೆ ಇದ್ದ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಬಜ್ಪೆ ಠಾಣೆ ಹೆಡ್ ಕಾನ್ಸ್ಟೇಬಲ್ ರಶೀದ್ ಅವರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

- Advertisement -

Latest News

error: Content is protected !!