Monday, June 8, 2026
Homeಕರಾವಳಿಸುಳ್ಯ ಕೋರ್ಟಿನ ಕಿರಿಯ ನ್ಯಾಯಾಧೀಶರ ವರ್ಗಾವಣೆ

ಸುಳ್ಯ ಕೋರ್ಟಿನ ಕಿರಿಯ ನ್ಯಾಯಾಧೀಶರ ವರ್ಗಾವಣೆ

- Advertisement -
- Advertisement -

ಸುಳ್ಯ: ಇಲ್ಲಿನ ನ್ಯಾಯಾಲಯದಲ್ಲಿ ಕಳೆದ ಮೂರು ವರ್ಷಗಳಿಂದ ಕಿರಿಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ, ನ್ಯಾಯಾಧೀಶ ಯಶ್ವಂತ್ ಕುಮಾರ್ ಇದೀಗ ಶಿವಮೊಗ್ಗದ ತೀರ್ಥಹಳ್ಳಿ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದಾರೆ.

 ಸುಳ್ಯ ವಕೀಲರ ಸಂಘದ ವತಿಯಿಂದ ತಾಲೂಕು ವಕೀಲರ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರನ್ನು ಬೀಳ್ಕೊಡಲಾಯಿತು. ವಕೀಲರ ಸಂಘದ ಅಧ್ಯಕ್ಷ ನಾರಾಯಣ ಕೆ. ಅಧ್ಯಕ್ಷತೆ ವಹಿಸಿದ್ದರು.
ಈ ಸಂಧರ್ಭದಲ್ಲಿ ನ್ಯಾಯಾಧೀಶರಿಗೆ ಸಂಘದ ವತಿಯಿಂದ ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ, ಸನ್ಮಾನಿಸಿ, ನೆನಪಿನ ಕಾಣಿಕೆ ನೀಡಲಾಯಿತು.

ಇದೇ ಸಂದರ್ಭದಲ್ಲಿ ಪೋಲೀಸ್ ಇಲಾಖೆ ವತಿಯಿಂದ ಸುಳ್ಯ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ, ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ , ನಿಕಟ ಪೂರ್ವ ಅಧ್ಯಕ್ಷ ಯಂ. ವೆಂಕಪ್ಪ ಗೌಡ ನ್ಯಾಯಾಧೀಶ ಯಶ್ವಂತ್ ಕುಮಾರ್‌ರವರಿಗೆ ಶಾಲು ಹೊದಿಸಿ ಸನ್ಮಾನಿಸಿ, ನೆನಪಿನ ಕಾಣಿಕೆ ನೀಡಿ ಶುಭಹಾರೈಸಿದರು.

- Advertisement -

Latest News

error: Content is protected !!