Friday, May 17, 2024
Homeಕರಾವಳಿಉಡುಪಿಉಡುಪಿಯಲ್ಲಿ ಆರಂಭವಾಗಿದೆ ತೃತೀಯ ಲಿಂಗಿಗಳ ಸಾರಥ್ಯದಲ್ಲಿ ಹೋಟೆಲ್

ಉಡುಪಿಯಲ್ಲಿ ಆರಂಭವಾಗಿದೆ ತೃತೀಯ ಲಿಂಗಿಗಳ ಸಾರಥ್ಯದಲ್ಲಿ ಹೋಟೆಲ್

spot_img
- Advertisement -
- Advertisement -

ಉಡುಪಿ; ತೃತೀಯ ಲಿಂಗಿಗಳ ಸಾರಥ್ಯದಲ್ಲಿ ಉಡುಪಿ ಬಸ್​ ನಿಲ್ದಾಣದ ಪಕ್ಕದಲ್ಲಿ ಹೋಟೆಲ್ ಆರಂಭವಾಗಿದೆ. ಮೂವರು ತೃತೀಯ ಲಿಂಗಿಗಳು ಸೇರಿ ಹೊಟೇಲ್​ ಆರಂಭಿಸಿದ್ದು ಆ ಮೂಲಕ ಸ್ವಾವಲಂಬಿ ಬದುಕಿಗೆ ನಾಂದಿ ಹಾಡಿದ್ದಾರೆ.  

ಪೂರ್ವಿ, ವೈಷ್ಣವಿ ಮತ್ತು ಚಂದನಾ ಎಂಬ  ಮೂವರು ತೃತೀಯ ಲಿಂಗಿಗಳು ಉಡುಪಿ ಬಸ್​ ನಿಲ್ದಾಣದ ಪಕ್ಕದಲ್ಲಿ ಹೊಸದಾಗಿ ಹೋಟೆಲ್​ ತೆರೆದಿದ್ದಾರೆ.ಈ ಹೋಟೆಲ್ ರಾತ್ರಿ ಮಾತ್ರ ತೆರೆದಿರುತ್ತದೆ.ರಾತ್ರಿ ಪಾಳಯದಲ್ಲಿ ಕೆಲಸ ಮಾಡುವವರಿಗೆ, ರಾತ್ರಿ ಆಹಾರ ಸಿಗದೆ ಪರದಾಡುತ್ತಿರುತ್ತಾರೆ.ಹೀಗಾಗಿ ಇವರಿಗೆ ಅನುಕೂಲವಾಗಲೆಂದು ಮಧ್ಯರಾತ್ರಿ 1 ಗಂಟೆಯಿಂದ ಬೆಳಿಗ್ಗೆ 7ಗಂಟೆಯವರೆಗೆ ಹೋಟೆಲ್​ ತೆರಯಲಾಗುತ್ತದೆ. ಇದು ದೂರದ ಊರಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ರಾತ್ರಿ ಸಮಯದಲ್ಲಿ ಉಡುಪಿಯಲ್ಲಿ ಎಲ್ಲ ಹೋಟೆಲ್​ಗಳು ಬಂದಾಗಿರುತ್ತವೆ.ಈ ಸಮಯದಲ್ಲಿ ರಾತ್ರಿ ಪ್ರಯಾಣಿಕರಿಗೆ ಮತ್ತು ರಾತ್ರಿ ಪಾಳಯದಲ್ಲಿ ಕೆಲಸ ಮಾಡುವ ಜನರಿಗೆ ಆಹಾರ ಸಿಗುವುದಿಲ್ಲ. ಹೀಗಾಗಿ ಮೂವರು ತೃತೀಯ ಲಿಂಗಿಗಳು ಪ್ರಾರಂಭಿಸಿದ್ದಾರೆ.

- Advertisement -
spot_img

Latest News

error: Content is protected !!