Saturday, June 6, 2026
Homeತಾಜಾ ಸುದ್ದಿಸಾರಿಗೆ ನಿಗಮದ ಇತಿಹಾಸದಲ್ಲೇ ಪ್ರಥಮ ಬಾರಿಗೆ 7,200 ನೌಕರರ ಶಿಸ್ತು ಪ್ರಕರಣ ಮನ್ನಾ

ಸಾರಿಗೆ ನಿಗಮದ ಇತಿಹಾಸದಲ್ಲೇ ಪ್ರಥಮ ಬಾರಿಗೆ 7,200 ನೌಕರರ ಶಿಸ್ತು ಪ್ರಕರಣ ಮನ್ನಾ

- Advertisement -
- Advertisement -

ಕಾರ್ಮಿಕ ದಿನವಾದ ಇಂದು ಕೆಎಸ್ಆರ್ ಟಿಸಿ ನೌಕರರಿಗೆ ನಿಗಮವು ಭರ್ಜರಿ ಗಿಫ್ಟ್ ನೀಡಿದೆ. ಈ ಮೂಲಕ ಕಾರ್ಮಿಕ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದೆ. ಸಾರಿಗೆ ನಿಗಮದ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಬರೋಬ್ಬರಿ 7200 ನೌಕರರ ಶಿಸ್ತು ಪ್ರಕರಣಗಳನ್ನು ಒಂದು ಬಾರಿಗೆ ಮಾತ್ರ ಅನ್ವಯಿಸುವಂತೆ ಮನ್ನಾ ಮಾಡಲಾಗಿದೆ.


ಹತ್ತು ತಿಂಗಳ ಅವಧಿಗಿಂತ ಕಡಿಮೆ ಅವಧಿಯ ಒಳಗಿನ ಗೈರುಹಾಜರಿಯನ್ನು ಮನ್ನಿಸಲಾಗಿದೆ. ನೌಕರರ ವಿಚಾರಣೆಯನ್ನು ರದ್ದುಗೊಳಿಸಿ, ಬಸ್ ನೀಡಿ ಚಾಲನೆಗೆ ಅನುವು ಮಾಡಿಕೊಡಲಾಗಿದೆ. ಅದರಂತೆ ಗೈರು ಹಾಜರಾಗಿದ್ದ 110 ನೌಕರರು ಕಳೆದ ಮೂರು ದಿನಗಳಿಂದ ಕರ್ತವ್ಯಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



ನಿಗಮದ ಸಮಸ್ತ ಸಿಬ್ಬಂದಿ ಸಂಖ್ಯೆ 35,000, ಅದರಲ್ಲಿ ಒಟ್ಟು 8414 ಶಿಸ್ತ ಪ್ರಕರಣಗಳಿದ್ದು, ಕಳೆದ ಮೂರು ದಿನಗಳಿಂದ 7200 ಶಿಸ್ತು ಪ್ರಕರಣಗಳನ್ನು ಅತೀ ಕಡಿಮೆ ಮೊತ್ತದ ದಂಡ ಅಂದರೆ, ರೂ100, ರೂ 200, ಗರಿಷ್ಠ ರೂ.500 ಅನ್ನು ವಿಧಿಸಿ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!