Friday, June 5, 2026
Homeತಾಜಾ ಸುದ್ದಿಮಂಗಳೂರು: ಬಸ್ ಫುಟ್‌ಬೋರ್ಡ್‌ನಲ್ಲಿ ನಿಂತು ಪ್ರಯಾಣ: ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ನಿರ್ಧಾರ

ಮಂಗಳೂರು: ಬಸ್ ಫುಟ್‌ಬೋರ್ಡ್‌ನಲ್ಲಿ ನಿಂತು ಪ್ರಯಾಣ: ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ನಿರ್ಧಾರ

- Advertisement -
- Advertisement -

ಮಂಗಳೂರು: ಖಾಸಗೀ ಬಸ್‌ನಲ್ಲಿ ವಿದ್ಯಾರ್ಥಿನಿಯರು ಫುಟ್‌ ಬೋರ್ಡ್‌ ಮೇಲೆ ನಿಂತುಕೊಂಡೇ ಅಪಾಯಕಾರಿಯಾಗಿ ಪ್ರಯಾಣಿಸುತ್ತಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಅಂತಹ ಘಟನೆಗಳ ಬಗ್ಗೆ ನಿಗಾ ಇಡಲು ಸಾರಿಗೆ ಇಲಾಖೆ ನಿರ್ಧರಿಸಿದೆ. ವಿಶೇಷ ತಂಡ ರಚಿಸಿ ನಗರದ ವಿವಿಧ ಕಡೆ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿದೆ.

ಕೆಲವೊಮ್ಮೆ ಬಸ್‌ನಲ್ಲಿ ಕುಳಿತುಕೊಳ್ಳಲು ಸೀಟ್ ಇದ್ದರೂ ಹುಡುಗರು ಫುಟ್‌ಬೋರ್ಡ್ ನಲ್ಲೇ ನಿಂತಿರ್ತಾರೆ. ಸಾರಿಗೆ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ ದಿನಗಳಲ್ಲಿ ಪ್ರತ್ಯೇಕ ತಂಡದೊಂದಿಗೆ ಕಾರ್ಯಾಚರಣೆ ನಡೆಸಲಿದೆ.

- Advertisement -

Latest News

error: Content is protected !!