ಬೆಳ್ತಂಗಡಿ : 33 ಕೆ ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಗಾಯಗೊಂಡ ಘಟನೆ ಮೇ.20 ರ ಸೋಮವಾರ ಬೆಳಗ್ಗೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಬೃಹತ್ ಗಾತ್ರದ ಮರ ವಿದ್ಯುತ್ ಟವರ್ ಮೇಲೆ ಉರುಳಿದೆ.ಈ ಸಂದರ್ಭ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಕನ್ಯಾಡಿಯ ರಮೇಶ್ ಎಂಬವರು ಅದೇ ರಸ್ತೆಯಲ್ಲಿ ಇಂದಬೆಟ್ಟು ಕಡೆ ಹೋಗುತ್ತಿದ್ದಾಗ ಮರದ ಭಾಗ ತಲೆಗೆ ಬಡಿದಿದೆ. ಕೂದಲೆಳೆಯ ಅಂತರದಲ್ಲಿ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಗಾಯಾಳುವನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಒಂದು ಗಂಟೆಗಿಂತ ಅಧಿಕ ಕಾಲ ಗುರಿಪಳ್ಳ-ಇಂದಬೆಟ್ಟು ರಸ್ತೆ ಸಂಪರ್ಕ ಕಡಿತಗೊಂಡಿತು.ಮೆಸ್ಕಾಂ ಸಿಬ್ಬಂದಿ ಸ್ಥಳೀಯರ ಸಹಕಾರದಲ್ಲಿ ಮರ ತೆರವುಗೊಳಿಸಿದರು. ಕಕ್ಕಿಂಜೆ ಸಬ್ ಸ್ಟೇಷನ್ ವಿದ್ಯುತ್ ಪೂರೈಕೆಯಲ್ಲಿ ಎರಡು ತಾಸಿಗಿಂತ ಅಧಿಕ ಕಾಲ ವ್ಯತ್ಯಯ ಕಂಡುಬಂತು 33ಕೆವಿ ವಿದ್ಯುತ್ ಟವರ್ ಗೆ ಕೊಂಚ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.
