Friday, June 5, 2026
Homeಚಿಕ್ಕಮಗಳೂರುಚಲಿಸುತ್ತಿದ್ದ ಕಾರಿನ ಮೇಲೆಯೇ ಮುರಿದು ಬಿದ್ದ ಮರ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ

ಚಲಿಸುತ್ತಿದ್ದ ಕಾರಿನ ಮೇಲೆಯೇ ಮುರಿದು ಬಿದ್ದ ಮರ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ

- Advertisement -
- Advertisement -

ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮೇಲೆಯೇ ಮರ ಮುರಿದು ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೆಮೂಡಿಗೆರೆಯಲ್ಲಿ ನಡೆದಿದೆ.

ಚಲಿಸುತ್ತಿದ್ದ ಕಾರಿನ ಮೇಲೆಯೇ  ಬೃಹತ್ ಗಾತ್ರದ  ಮರದ ಕೊಂಬೆಗಳು ಮುರಿದು ಬಿದ್ದಿವೆ. ಪವಾಡಸದೃಶ ರೀತಿಯಲ್ಲಿ ಕಾರಿನಲ್ಲಿದ್ದವರೆಲ್ಲರೂ ಪಾರಾಗಿದ್ದಾರೆ.

ಕಾರಿನಲ್ಲಿ ಮಾಜಿ ಸಚಿವೆ ಮೋಟಮ್ಮ ಸಹೋದರ
ಎಂ.ಎಸ್ ಅನಂತು, ಅವರ ಪತ್ನಿ ಸೇರಿದಂತೆ  ಐವರು ಪ್ರಯಾಣಿಸುತ್ತಿದ್ದರು.

ಕಾರಿನ ಮೇಲೆ ಮರದ ಕೊಂಬೆಗಳು ಬೀಳುವ ಮೈ ಜುಮ್ ಎನಿಸುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!