Wednesday, May 15, 2024
Homeಕರಾವಳಿಸುಳ್ಯದಲ್ಲಿ ಮನೆ ಮೇಲೆ ಬಿದ್ದ ಮರ: ಮನೆಯವರು ಪ್ರಾಣಾಪಾಯದಿಂದ ಪಾರು

ಸುಳ್ಯದಲ್ಲಿ ಮನೆ ಮೇಲೆ ಬಿದ್ದ ಮರ: ಮನೆಯವರು ಪ್ರಾಣಾಪಾಯದಿಂದ ಪಾರು

spot_img
- Advertisement -
- Advertisement -

ಸುಳ್ಯ: ಭಾರೀ ಮಳೆಗೆ ಮಣ್ಣು ಕುಸಿದು ಮನೆ ಮೇಲೆ ಮರ ಉರುಳಿ ಬಿದ್ದ ಘಟನೆ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಪಕ್ಕದ ಗುಡ್ಡದ ಮಣ್ಣು ಕುಸಿದಿದೆ. ಈ ವೇಳೆ ಗುಡ್ಡದ ಮೇಲಿದ್ದ ಮರ ಉರುಳಿ ಬಿದ್ದು ಮನೆಗೆ ಹಾನಿ ಉಂಟಾಗಿದೆ. ಮರ ಬಿದ್ದ ರಭಸಕ್ಕೆ ಮನೆಯ ಹೆಂಚುಗಳು ಪುಡಿ ಪುಡಿಯಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಹೊರಗೆ ಬಂದ ಕಾರಣ ಪ್ರಾಣಾಪಯದಿಂದ ಪಾರಾಗಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಭಾರೀ ಮಳೆಯಾಗಿದೆ. ನೇತ್ರಾವತಿ ಮತ್ತು ಕುಮಾರಾಧಾರಾ ನದಿಗಳಲ್ಲಿ ನೀರಿನ ಮಟ್ಟ ಭಾರೀ ಏರಿಕೆಯಾಗಿದೆ.‌ ಮುಂದಿನ ಕೆಲವು ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

- Advertisement -
spot_img

Latest News

error: Content is protected !!