Thursday, June 4, 2026
Homeಕರಾವಳಿಬೆಳ್ತಂಗಡಿ : ಮನೆ ಅಂಗಳದಲ್ಲಿ ನಿಂತಿದ್ದ ವೇಳೆ ಉರುಳಿ ಬಿದ್ದ ಮರ ; ಚಿಕಿತ್ಸೆ ಫಲಕಾರಿಯಾಗದೇ...

ಬೆಳ್ತಂಗಡಿ : ಮನೆ ಅಂಗಳದಲ್ಲಿ ನಿಂತಿದ್ದ ವೇಳೆ ಉರುಳಿ ಬಿದ್ದ ಮರ ; ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಮೃತ್ಯು!

- Advertisement -
- Advertisement -

ಧರ್ಮಸ್ಥಳ : ಮನೆಯ ಅಂಗಳದಲ್ಲಿದ್ದ ಮರವೊಂದು ಆಕಸ್ಮಿಕವಾಗಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರಿಗೆ ಗಂಭಿರ ಗಾಯಗೊಂಡು ಮೃತಪಟ್ಟ ಘಟನೆ ಪುದುವೆಟ್ಟು ಎಂಬಲ್ಲಿ ನಡೆದಿದೆ.

ಪುದುವೆಟ್ಟು ಗ್ರಾಮದ ಸಾಮೆದಕಲಪು ವರಸಾರಿ ಮನೆ ನಿವಾಸಿ ಆದಂ ಸಾಹೇಬ್(61) ಮೃತಪಟ್ಟ ದುರ್ದೈವಿ. ಇವರು ಬುಧವಾರದಂದು ಮಧ್ಯಾಹ್ನದ ವೇಳೆ ಮನೆಯ ಅಂಗಳದಲ್ಲಿ ನಿಂತುಕೊಂಡಿದ್ದ ಸಂದರ್ಭ ಆಕಸ್ಮಿಕವಾಗಿ ಅಂಗಳದ ಬದಿಯಲ್ಲಿದ್ದ ಮರವೊಂದು ಬೇರು ಸಮೇತ ಅವರ ಮೇಲೆ ಉರುಳಿ ಬಿದ್ದಿದೆ. ಇದರ ಪರಿಣಾಮ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಕೂಡಲೇ ಅವರಿಗೆ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!