Friday, June 5, 2026
Homeಕರಾವಳಿಉಡುಪಿಉಡುಪಿ: ಚಲಿಸುತ್ತಿದ್ದ ರಿಕ್ಷಾದ ಮೇಲೆ ಮರ ಬಿದ್ದು ದಂಪತಿ ಸಾವು

ಉಡುಪಿ: ಚಲಿಸುತ್ತಿದ್ದ ರಿಕ್ಷಾದ ಮೇಲೆ ಮರ ಬಿದ್ದು ದಂಪತಿ ಸಾವು

- Advertisement -
- Advertisement -

ಉಡುಪಿ: ಚಲಿಸುತ್ತಿದ್ದ ರಿಕ್ಷಾದ ಮೇಲೆ ಮರ ಬಿದ್ದು ದಂಪತಿ ಸಾವನ್ನಪ್ಪಿರುವ ಘಟನೆ ಕಾಪುವಿನ ಮಜೂರು ಮಸೀದಿ ಬಳಿ ಇಂದು ರಾತ್ರಿ ನಡೆದಿದೆ.

ರಾತ್ರಿ ಸುರಿದ ಭಾರೀ ಗಾಳಿ ಸಹಿತ ಮಳೆಯಿಂದಾಗಿ ರಸ್ತೆ ಬದಿಯ ಬೃಹತ್ ಮರವೊಂದು ಕಾಪು ಕಡೆಯಿಂದ ಶಿರ್ವ ಕಡೆ ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದಿದೆ. ಇದರಿಂದ ರಿಕ್ಷಾ ಸಂಪೂರ್ಣ ಜಖಂಗೊಂಡಿದ್ದು, ರಿಕ್ಷಾ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಆದರೆ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಮರದಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು ಎನ್ನಲಾಗಿದೆ. ಮರದಡಿ ಸಿಲುಕಿರುವ ರಿಕ್ಷಾ ಮತ್ತು ಪ್ರಯಾಣಿಕರನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಇದರಿಂದ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿದ್ದಾರೆ.

- Advertisement -

Latest News

error: Content is protected !!