Thursday, June 25, 2026
Homeಚಿಕ್ಕಮಗಳೂರುಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹದಾಕಾರದ ಮ

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹದಾಕಾರದ ಮ

- Advertisement -
- Advertisement -

ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ ಬೃಹದಾಕಾರದ ಮರ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನಿಡುವಾಳೆ ಸಮೀಪ ನಡೆದಿದೆ.
ಕೂದಲೆಳೆ ಅಂತರದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಮುಂಭಾಗಕ್ಕೆ ಮರ ಬಿದ್ದಿದ್ದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ, ಕಾರಿನಲ್ಲಿದ್ದ ಮಂಜುನಾಥ್, ಕೃಷ್ಣ, ಸಚಿನ್ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇವರು ಹೆಮ್ಮಕ್ಕಿಯಿಂದ ಮಂಗಳೂರು ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.
ಮರ ಬಿದ್ದ ಪರಿಣಾಮ ಕೆಲಕಾಲ ಬಾಳೆಹೊನ್ನೂರು- ಕೊಟ್ಟಿಗೆಹಾರ ಮಾರ್ಗದ ಸಂಚಾರ ಸ್ಥಗಿತವಾಗಿತ್ತು. ಘಟನೆಯಿಂದಾಗಿ ಕಾರಿನ ಮುಂಭಾಗ ಜಖಂ ಆಗಿದ್ದು, ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!