Friday, May 3, 2024
HomeUncategorizedಬೆಳ್ತಂಗಡಿ: ಶಿಬಾಜೆ ರಕ್ಷಿತಾರಣ್ಯದಲ್ಲಿ ಬೆಲೆಬಾಳುವ ಮರಗಳನ್ನು ಕದ್ದ ಮರಗಳ್ಳರ ಬಂಧನ

ಬೆಳ್ತಂಗಡಿ: ಶಿಬಾಜೆ ರಕ್ಷಿತಾರಣ್ಯದಲ್ಲಿ ಬೆಲೆಬಾಳುವ ಮರಗಳನ್ನು ಕದ್ದ ಮರಗಳ್ಳರ ಬಂಧನ

spot_img
- Advertisement -
- Advertisement -

ಬೆಳ್ತಂಗಡಿ: ಇಲ್ಲಿನ ಶಿಬಾಜೆ ಸರಕಾರಿ ರಕ್ಷಿತಾರಣ್ಯದಿಂದ ಬೆಲೆಬಾಳುವ ಮರಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಮರಗಳ್ಳರ ತಂಡವನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಶಿಬಾಜೆಯ ಕಜೆ ಎಂಬಲ್ಲಿ ನಡೆದಿದೆ.

ಕೊಕ್ಕಡ ಸಮೀಪದ  ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್, ಕಳೆಂಜ ಗ್ರಾಮದ ಕಾಯಡ ನಿವಾಸಿ ಜಿತೇಂದ್ರ, ಶಿಬಾಜೆ ನಿವಾಸಿ ಉಮೇಶ ಹಾಗೂ ವಿಜಯ ಬಂಧಿತ ಆರೋಪಿಗಳು. ಇವರು ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿಂದ ಬೆಲೆಬಾಳುವ ಮತ್ತಿ ಹಾಗೂ ಹೆಬ್ಬಲಸು ಮರಗಳನ್ನು ಅಕ್ರಮವಾಗಿ ಕಡಿದು ಅದನ್ನು ಅಲ್ಲೇ ಸೈಜ್ ತುಂಡುಗಳನ್ನಾಗಿ ಮಾಡಿ ಮಾರಾಟ ಮಾಡುತ್ತಿದ್ದರು.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯಾಧಿಕಾರಿಗಳ ತಂಡ ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿ, ಮರದ ದಿಮ್ಮಿ ಹಾಗೂ ಸೈಜ್ ತುಂಡುಗಳನ್ನು ವಶಪಡಿಸಿಕೊಂಡಿದೆ. ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ತಡ್ಲಗಿ, ಅರಣ್ಯ ರಕ್ಷಕರಾದ ನಿಂಗಪ್ಪ ಅವಾರಿ, ಪ್ರಶಾಂತ್ ಮಾಳಗಿ, ರಸೂಲ್, ಸುನೀಲ್ ನಾಯಕ್, ಅರಣ್ಯ ವೀಕ್ಷಕ ದಾಮೋದರವರ ತಂಡ ಕಾರ್ಯಾಚರಣೆ ನಡೆಸಿ, ಮುಂದಿನ ತನಿಖೆಗಾಗಿ ಈ ಪ್ರಕರಣವನ್ನು ವಲಯ ಅರಣ್ಯಾಧಿಕಾರಿ ಮಧುಸೂಧನ್ ಅವರಿಗೆ ಹಸ್ತಾಂತರಿಸಿದ್ದಾರೆ.

- Advertisement -
spot_img

Latest News

error: Content is protected !!