Saturday, August 29, 2026
Homeಕರಾವಳಿಉಡುಪಿಬಸ್ರೂರಿನಲ್ಲಿ ಮನೆ ಮೇಲೆ ಮರ ಬಿದ್ದು ದಂಪತಿಗೆ ಗಾಯ

ಬಸ್ರೂರಿನಲ್ಲಿ ಮನೆ ಮೇಲೆ ಮರ ಬಿದ್ದು ದಂಪತಿಗೆ ಗಾಯ

- Advertisement -
- Advertisement -

ಉಡುಪಿ: ಭಾರೀ ಗಾಳಿ ಮಳೆಗೆ ಮನೆಯ ಮೇಲೆ ಮರ ಬಿದ್ದು ದಂಪತಿ ಗಾಯಗೊಂಡಿರುವ ಘಟನೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಬಸ್ರೂರಿನ ಮಕ್ಕಿ ಮನೆಯಲ್ಲಿ ರಾತ್ರಿ ಸುರಿದ ಭಾರೀ ಗಾಳಿ ಮಳೆಯಿಂದ ಮನೆ ಮೇಲೆ ಬಿದ್ದ ಮರ ಕಾರಣ ಮನೆಯೊಳಗಿದ್ದ ದಂಪತಿಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.‌

ಇನ್ನು ಕಾಪು ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಕಟಪಾಡಿಯಲ್ಲಿ ಬೃಹತ್ ಗಾತ್ರದ ಮರ ಧರೆಗುರುಳಿದೆ. ಕಟಪಾಡಿ ವಿಶ್ವನಾಥ ಕ್ಷೇತ್ರದ ಮುಂಭಾಗದಲ್ಲಿದ್ದ ಮರ ರಾತ್ರಿ ಗಾಳಿ ಮಳೆಗೆ ನೆಲಕ್ಕುರುಳಿದ ಕಾರಣ ವಿದ್ಯುತ್ ಕಂಬ ಮತ್ತು ಮನೆಗೆ ಹಾನಿ ಉಂಟಾಗಿದೆ. ಅರಣ್ಯ ಇಲಾಖೆ‌ ಸಿಬ್ಬಂದಿ ಮತ್ತು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಮಧ್ಯೆ ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಗೆ ಇಂದು ಆರೆಂಜ್ ಅಲರ್ಟ್, ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಡಲಿಗೆ ಇಳಿಯದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದ್ದು, ಮೀನುಗಾರಿಕೆ ನಡೆಸದಂತೆ ನಾಡದೋಣಿಗಳಿಗೆ ಎಚ್ಚರಿಕೆ ನೀಡಲಾಗಿದೆ.

- Advertisement -

Latest News

error: Content is protected !!