Saturday, June 13, 2026
Homeಕರಾವಳಿರಾಜ್ಯ ಬಿಜೆಪಿ ಯುವ ಮೋರ್ಛಾ ವಿಶೇಷ ಸಭೆಯಲ್ಲಿ ಪ್ರವೀಣ್ ನೆಟ್ಟಾರು ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಕೆ

ರಾಜ್ಯ ಬಿಜೆಪಿ ಯುವ ಮೋರ್ಛಾ ವಿಶೇಷ ಸಭೆಯಲ್ಲಿ ಪ್ರವೀಣ್ ನೆಟ್ಟಾರು ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಕೆ

- Advertisement -
- Advertisement -

ಬೆಂಗಳೂರು: ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ.‌ ವಿ. ಅವರು ಇಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಯುವ ಮೋರ್ಚಾ ವಿಶೇಷ ಸಭೆ ನಡೆಸಿದರು.

ಸಭೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಕ್ಷಿಣ ಕನ್ನಡ ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ದಿವಂಗತ ಪ್ರವೀಣ್‌ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೌನಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಯುವ ಮೋರ್ಚಾ ಪ್ರಭಾರಿಗಳಾದ ಮಹೇಶ್‌ ಟೆಂಗಿನಕಾಯಿ, ಯುವ ಮೋರ್ಚಾ ರಾಜ್ಯ ಅಧ್ಯಕ್ಷರಾದ ಡಾ. ಸಂದೀಪ್‌ ಕುಮಾರ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಡಾ. ಮಲ್ಲಿಕಾರ್ಜುನ ಬಾಳಿಕಾಯಿ, ಅಜಿತ್ ಹೆಗಡೆ ಬೆಳ್ಳೆಕೇರಿ‌ ಮತ್ತು ಯುವ ಮೋರ್ಚಾ ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!