Thursday, June 4, 2026
Homeಕರಾವಳಿಬೆಳ್ತಂಗಡಿಯಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಕೃಷಿ ಸಲಕರಣೆಗಳ ವಿತರಣೆ

ಬೆಳ್ತಂಗಡಿಯಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಕೃಷಿ ಸಲಕರಣೆಗಳ ವಿತರಣೆ

- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸುಮಾರು 80 ಅರ್ಹ ವಿಶೇಷ ಚೇತನರಿಗೆ, ಕೃಷಿಕರಿಗೆ ಮತ್ತು ಕುಶಲಕರ್ಮಿಗಳಿಗೆ ತ್ರಿಚಕ್ರ ವಾಹನ ಮತ್ತು ಸಲಕರಣೆಗಳನ್ನು ವಿತರಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಬೆಳ್ತಂಗಡಿ ತಾಲೂಕು ಪಂಚಾಯತ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕೃಷಿ ಇಲಾಖೆ ಬೆಳ್ತಂಗಡಿ ಸಹಯೋಗದೊಂದಿಗೆ ವಾಹನ ಮತ್ತು ಉಪಕರಣಗಳನ್ನು ವಿತರಿಸಲಾಯಿತು.‌

23 ಜನ ಅರ್ಹ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳು, 10 ಜನ ಅರ್ಹ ಕೃಷಿಕ ಫಲಾನುಭವಿಗಳಿಗೆ ಸಾಧನ-ಸಲಕರಣೆಗಳು ಮತ್ತು 47 ಜನ ಅರ್ಹ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣಗಳನ್ನು ಹಸ್ತಾಂತರಿಸಲಾಯಿತು.‌ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತ್ರಿಚಕ್ರ ವಾಹನ ಮತ್ತು ಕೃಷಿ ಸಲಕರಣೆಗಳನ್ನು‌ ವಿತರಿಸಿದರು

- Advertisement -

Latest News

error: Content is protected !!