Monday, June 8, 2026
Homeಕರಾವಳಿಉಡುಪಿಆಗುಂಬೆ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಮೃತ್ಯು, ಐವರ ಸ್ಥಿತಿ ಗಂಭೀರ

ಆಗುಂಬೆ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಮೃತ್ಯು, ಐವರ ಸ್ಥಿತಿ ಗಂಭೀರ

- Advertisement -
- Advertisement -

ಶಿವಮೊಗ್ಗ: ಆಗುಂಬೆ ಘಾಟಿಯ 5ನೇ ತಿರುವು ಪಡೆಯುತ್ತಿದ್ದಂತ ಸಂದರ್ಭದಲ್ಲಿ ಲಾರಿಯೊಂದು ಪ್ರಪಾತಕ್ಕೆ ಉರುಳಿ ಬಿದ್ದಿದ್ದರಿಂದಾಗಿ, ಲಾರಿಯಲ್ಲಿದ್ದಂತ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

ಮೃತರು ಕಾರ್ಕಳ ತಾಲೂಕಿನ ಮಿಯ್ಯಾರು ಮೂಲದವರು ಎಂದು ತಿಳಿದು ಬಂದಿದ್ದು, ಹೆಬ್ರಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಹೆಬ್ರಿ ಲಿಮಿಟೆಡ್ ಗೆ ಸೇರಿದ ಈಚರ್ ವಾಹನವನ್ನು ಜೋಡುಕಟ್ಟೆಯ ಯಜ್ಞೇಶ್  ಚಾಲನೆ ಮಾಡುತ್ತಿದ್ದರು. ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಈಚರ್ ಲಾರಿ ಘಾಟಿ ರಸ್ತೆಯ 5 ನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗಿದೆ.

- Advertisement -

Latest News

error: Content is protected !!