Wednesday, June 24, 2026
Homeತಾಜಾ ಸುದ್ದಿಬಿಜೆಪಿ ಜೊತೆಗೆ ವಿಧಾನಸೌಧಕ್ಕೆ ಮತ್ತೆ ಬರಲು ಪ್ರಯತ್ನಿಸುತ್ತೇವೆ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ

ಬಿಜೆಪಿ ಜೊತೆಗೆ ವಿಧಾನಸೌಧಕ್ಕೆ ಮತ್ತೆ ಬರಲು ಪ್ರಯತ್ನಿಸುತ್ತೇವೆ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ

- Advertisement -
- Advertisement -

ಬೆಂಗಳೂರು: ಬಿಜೆಪಿಯೊಂದಗಿನ ಮೈತ್ರಿಯ ಜೊತೆಗೂಡಿ ವಿಧಾನಸೌಧಕ್ಕೆ ಮತ್ತೆ ಬರಲು ಪ್ರಯತ್ನಿಸುತ್ತೇವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಸೌಧಕ್ಕೆ ಇಂದು ಭೇಟಿ ನೀಡಿದ್ದ ವೇಳೆ ಮುಂದೆ ಮತ್ತೆ ವಿಧಾನಸೌಧಕ್ಕೆ ಬರುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಅದೆಲ್ಲವನ್ನೂ ಭಗವಂತ ನಿಗದಿ ಮಾಡುತ್ತಾನೆ ಅದರ ಪ್ರಕಾರವಾಗಿ ನಾವು ಕೆಲಸ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಇಂದು ಹೆಚ್.ಡಿ. ಕುಮಾರಸ್ವಾಮಿ ಎರಡು ವರ್ಷಗಳ ನಂತರ ವಿಧಾನಸೌಧಕ್ಕೆ ಭೇಟಿ ನೀಡಿದ್ದರು.

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಭೂಮಿ ನಿಗದಿ ಸಂಬಂಧವಾಗಿ ರಾಜ್ಯದ ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ.ಬಿ. ಪಾಟೀಲ್ ಜೊತೆಗಿನ ಸಭೆಗಾಗಿ ಮಂಡ್ಯ ಸಂಸದರೂ ಆಗಿರುವ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಇಲಾಖೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ವಿಧಾನಸೌಧಕ್ಕೆ ಭೇಟಿ ನೀಡಿದ್ದರು.

- Advertisement -

Latest News

error: Content is protected !!