Friday, June 26, 2026
Homeಕರಾವಳಿಕೋಟ್ಯಾಂತರ ರೂಪಾಯಿ ಮೌಲ್ಯದ ಆಂಬರ್ ಗ್ರೀಸ್ ಮಾರಾಟಕ್ಕೆ ಯತ್ನ: ಬೆಳ್ತಂಗಡಿಯ ಇಬ್ಬರು ಆರೋಪಿಗಳು ಮಂಗಳೂರು ಸಿಸಿಬಿ...

ಕೋಟ್ಯಾಂತರ ರೂಪಾಯಿ ಮೌಲ್ಯದ ಆಂಬರ್ ಗ್ರೀಸ್ ಮಾರಾಟಕ್ಕೆ ಯತ್ನ: ಬೆಳ್ತಂಗಡಿಯ ಇಬ್ಬರು ಆರೋಪಿಗಳು ಮಂಗಳೂರು ಸಿಸಿಬಿ ಬಲೆಗೆ

- Advertisement -
- Advertisement -

ಮಂಗಳೂರು : ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋಟ್ಯಂತರ ಬೆಲೆಬಾಳುವ ಆಂಬರ್-ಗ್ರೀಸ್(ತಿಮಿಂಗಿಲ ವಾಂತಿ) ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ದಸ್ತಗಿರಿ ಮಾಡಿ ಕೋಟ್ಯಾಂತರ ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಮಂಗಳೂರು ನಗರದ ಲಾಲ್ ಬಾಗ್ ನ ಕರಾವಳಿ ಮೈದಾನ ಪರಿಸರದಲ್ಲಿ ಕೋಟ್ಯಂತರ ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್-ಗ್ರೀಸ್(ತಿಮಿಂಗಿಲ ವಾಂತಿ) ನ್ನು ವಶದಲ್ಲಿಟ್ಟು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ನಿವಾಸಿ ಪಡ್ಯಾರು ನಿವಾಸಿ ನಿಮಿತ್(26) ಮತ್ತು ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿಯೋಗೀಶ್ ಪೂಜಾರಿ (41) ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ಅಪರೂಪದ ಹಾಗೂ ಕೋಟ್ಯಂತರ ರೂಪಾಯಿ ಬೆಲೆಬಾಳುವ 3.2 ಕೆಜಿ ತೂಕದ ಅಂಬರ್ ಗ್ರೀಸ್(ತಿಮಿಂಗಿಲ ವಾಂತಿ) ನ್ನು  ಹಾಗೂ 2 ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇದಕ್ಕೆ ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 3.2 ಕೋಟಿ ಮೌಲ್ಯವಿರುತ್ತದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಅಪರೂಪದ ಬೆಲೆಬಾಳುವ ಅಂಬರ್ ಗ್ರೀಸ್ ಹಾಗೂ ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

- Advertisement -

Latest News

error: Content is protected !!