Monday, May 6, 2024
Homeತಾಜಾ ಸುದ್ದಿಸರ್ಕಾರಿ ಶಾಲೆಯಲ್ಲಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಿಸಲು ಯತ್ನ; ಶಿಕ್ಷಕ ಅಮಾನತು

ಸರ್ಕಾರಿ ಶಾಲೆಯಲ್ಲಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಿಸಲು ಯತ್ನ; ಶಿಕ್ಷಕ ಅಮಾನತು

spot_img
- Advertisement -
- Advertisement -

ತಮಿಳುನಾಡು: ಕನ್ಯಾಕುಮಾರಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ ಶಿಕ್ಷಕನೋರ್ವ ವಿದ್ಯಾರ್ಥಿಗಳನ್ನು ಹಿಂದೂ ಧರ್ಮದಿಂದ ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಿಸಲು ಯತ್ನಿಸಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದೆ.

ಕನ್ನಟ್ಟುವಿಲೈ ಪ್ರದೇಶದಲ್ಲಿರುವ ಶಾಲೆಯಲ್ಲಿ 300ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡ್ತಿದ್ದಾರೆ. ಇಲ್ಲಿ ಹೊಲಿಗೆ ವಿಷಯದ ಕುರಿತಾಗಿ ಪಾಠ ಮಾಡುವ ಶಿಕ್ಷಕ ತಮ್ಮ ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕ್ರಿಶ್ಚಿಯನ್​ ಪ್ರಾರ್ಥನೆ ಓದುವಂತೆ ಒತ್ತಾಯಿಸಿದ್ದಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಹೊಲಿಗೆ ಸಂಬಂಧ ಪಾಠ ಹೇಳುವ ಬದಲು ಕ್ರಿಶ್ಚಿಯನ್​ ಪ್ರಾರ್ಥನೆ ಓದಿಸುವ ಚಟುವಟಿಕೆಯಲ್ಲಿ ನಿರತರರಾಗಿದ್ದು, ಈ ವಿಷಯವನ್ನು ವಿದ್ಯಾರ್ಥಿಗಳು ಪೋಷಕರ ಗಮನಕ್ಕೆ ತಂದಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೂ ವಿದ್ಯಾರ್ಥಿಗಳು ಶಿಕ್ಷಕನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ, ಮುಖ್ಯೋಪಾಧ್ಯಾಯರಿಗೂ ದೂರು ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕನನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದೆ.

- Advertisement -
spot_img

Latest News

error: Content is protected !!