Sunday, November 1, 2026
Homeಪ್ರಮುಖ-ಸುದ್ದಿಪ್ರತಿವರ್ಷ ಸೆಪ್ಟೆಂಬರ್ 18ರಂದು 'ತುಳು ದಿನ' ಆಚರಣೆ

ಪ್ರತಿವರ್ಷ ಸೆಪ್ಟೆಂಬರ್ 18ರಂದು ‘ತುಳು ದಿನ’ ಆಚರಣೆ

- Advertisement -
- Advertisement -

ಮಂಗಳೂರು: ತುಳು ಭಾಷೆಗೆ ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಲಾಗಿದ್ದು, ಪ್ರತಿವರ್ಷ ಸೆಪ್ಟೆಂಬರ್ 18ರಂದು ‘ತುಳು ದಿನ’ (ತುಳು ದಿವಸ)ವನ್ನಾಗಿ ಆಚರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಘೋಷಿಸಿದ್ದಾರೆ.

ನಗರದ ನೆಹರು ಮೈದಾನದಲ್ಲಿ ಭಾನುವಾರ (ನ.1) ನಡೆದ ಜಿಲ್ಲಾಮಟ್ಟದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿದ ಅವರು, ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು.

ಪಂಚದ್ರಾವಿಡ ಭಾಷೆಗಳಲ್ಲಿ ಒಂದಾದ ತುಳುವಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡುವ ಮೂಲಕ ತುಳುವರ ಹಲವು ದಶಕಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಅಲ್ಲದೆ, ತುಳು ಭಾಷೆಯನ್ನು ಸಂವಿಧಾನದ 8ನೇ ಅನುಸೂಚಿಗೆ ಸೇರಿಸುವ ಪ್ರಕ್ರಿಯೆಗೂ ಈ ನಿರ್ಧಾರ ಸಹಕಾರಿಯಾಗಲಿದೆ. ತುಳುವಿಗೆ ಅಧಿಕೃತ ಸ್ಥಾನಮಾನ ದೊರೆಯಬೇಕೆಂಬ ಜನರ ಬಹುಕಾಲದ ಕನಸು ನನಸಾಗುವತ್ತ ಮಹತ್ವದ ಹೆಜ್ಜೆ ಇಡಲಾಗಿದೆ ಎಂದು ಅವರು ತಿಳಿಸಿದರು.

- Advertisement -

Latest News

error: Content is protected !!