Friday, September 18, 2026
Homeಕರಾವಳಿಮಂಗಳೂರುತುಳು ಭಾಷೆಗೆ 2ನೇ ಅಧಿಕೃತ ಭಾಷಾ ಸ್ಥಾನಮಾನ: ಮಂಗಳೂರು ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಐತಿಹಾಸಿಕ...

ತುಳು ಭಾಷೆಗೆ 2ನೇ ಅಧಿಕೃತ ಭಾಷಾ ಸ್ಥಾನಮಾನ: ಮಂಗಳೂರು ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಐತಿಹಾಸಿಕ ತೀರ್ಮಾನ

- Advertisement -
- Advertisement -

ಮಂಗಳೂರು: ಕರಾವಳಿಯ ಇತಿಹಾಸದಲ್ಲೇ ಪ್ರಥಮ ಬಾರಿಗೆ ಮಂಗಳೂರಿನಲ್ಲಿ ಶುಕ್ರವಾರ ನಡೆದ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ ನೀಡಲು ತೀರ್ಮಾನಿಸಲಾಗಿದೆ.

ಸತತ 3 ಗಂಟೆಗಳ ಕಾಲ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತುಳು ಭಾಷೆಗೆ 2nd ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿರ್ಧಾರವನ್ನು ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಪ್ರಕಟಿಸಿದರು.

”ಹಿಂದಿನ ಸರ್ಕಾರಗಳು ಈ ನಿರ್ಧಾರವನ್ನು ಏಕೆ ಕೈಗೊಳ್ಳಲಿಲ್ಲ ಎಂದು ನಾನು ಪ್ರಶ್ನಿಸುವುದಿಲ್ಲ. ನಮಗೆ ಸ್ಪಷ್ಟ ಬದ್ಧತೆ ಇದೆ. ನಾವು ಭಾವನೆಗಳ ಮೇಲೆ ರಾಜಕಾರಣ ಮಾಡುವುದಿಲ್ಲ, ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ” ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಹುಸಂಖ್ಯಾತ ಜನರ ಮಾತೃಭಾಷೆಯಾಗಿರುವ ತುಳುವಿಗೆ ಅಧಿಕೃತ ಸ್ಥಾನಮಾನ ನೀಡುವ ಮೂಲಕ ರಾಜ್ಯ ಸರ್ಕಾರ ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ಸಾಂಸ್ಕೃತಿಕ ಬೇಡಿಕೆಗೆ ಗೌರವ ನೀಡಿದೆ.

- Advertisement -

Latest News

error: Content is protected !!