Monday, April 29, 2024
Homeಕರಾವಳಿಉಡುಪಿತುಳು ಲಿಪಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ: ಸಚಿವ ಅರವಿಂದ ಲಿಂಬಾವಳಿ

ತುಳು ಲಿಪಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ: ಸಚಿವ ಅರವಿಂದ ಲಿಂಬಾವಳಿ

spot_img
- Advertisement -
- Advertisement -

ಬೆಂಗಳೂರು: ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್‌ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಈ ಕ್ರಮದಿಂದಾಗಿ ತುಳು ಲಿಪಿಯು ಯುನಿಕೋಡ್‌ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ.‌ ಸುಮಾರು ಹತ್ತು ವರ್ಷಗಳಿಂದ ತುಳು ಲಿಪಿಯನ್ನು ರೂಪಿಸುವ ಬಗ್ಗೆ ಹಲವು ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ತುಳು ಭಾಷಾ ಮತ್ತು ಲಿಪಿ ತಜ್ಞರು ಸರ್ವಾನುಮತಿಯಿಂದ ರೂಪಿಸಿದ ತುಳು ಲಿಪಿ ಪಟ್ಟಿಯನ್ನು ಅಕಾಡೆಮಿಯು ಅಂಗೀಕರಿಸಿ ಯುನಿಕೋಡ್‌ ನಕಾಶೆಗೆ ಸೇರಿಸಲು ಅನುಮೋದನೆ ನೀಡಲಾಗಿದೆ ಎಂದು ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತುಳು ಲಿಪಿ ಪಟ್ಟಿಯನ್ನು ಪರಾಮರ್ಶಿಸಿ ಅನುಮೋದಿಸಲು ಮೈಸೂರಿನಲ್ಲಿರುವ ಕೇಂದ್ರ ಸರ್ಕಾರದ ಭಾರತೀಯ ಭಾಷಾ ಸಂಸ್ಥಾನಕ್ಕೆ ಕರ್ನಾಟಕ ಸರ್ಕಾರದಿಂದ ಕೋರಲಾಗಿತ್ತು. ಭಾಷಾ ಸಂಸ್ಥಾನವು ಇದಕ್ಕಾಗಿ ಭಾಷಾ ತಜ್ಞರ ಸಮಿತಿಯನ್ನು ರಚಿಸಿ, ಚರ್ಚಿಸಿ ಲಿಪಿ ಪಟ್ಟಿಯನ್ನು ಅನುಮೋದಿಸಿ, ಯುನಿಕೋಡ್‌ ಕನ್ಸಾರ್ಶಿಯಂಗೆ ಸಲ್ಲಿಸಲು ಶಿಫಾರಸು ಮಾಡಿತು. ಅದರಂತೆ ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತುಳು ಅಕಾಡೆಮಿಗೆ ಪತ್ರ ಬರೆಯಲಾಗಿದೆ.

- Advertisement -
spot_img

Latest News

error: Content is protected !!