Saturday, June 13, 2026
Homeಕರಾವಳಿಮಾಣಿ ಗ್ರಾಮದಲ್ಲಿ ತುಳು ಲಿಪಿ ನಾಮಫಲಕ ಅನಾವರಣ!

ಮಾಣಿ ಗ್ರಾಮದಲ್ಲಿ ತುಳು ಲಿಪಿ ನಾಮಫಲಕ ಅನಾವರಣ!

- Advertisement -
- Advertisement -

ಬಂಟ್ವಾಳ: ಮಂಗಳೂರು-ಬೆಂಗಳೂರು ಮತ್ತು ಬಂಟ್ವಾಳ-ಮೈಸೂರು ರಾಷ್ಟ್ರೀಯ ಹೆದ್ದಾರಿಗಳು ಸಂಪರ್ಕಿಸುವ ಮಾಣಿ ಗ್ರಾಮದ ಕೇಂದ್ರ ಸ್ಥಳದಲ್ಲಿ ಅಳವಡಿಸಲಾದ ತುಳು ಲಿಪಿಯಲ್ಲಿರುವ ಗ್ರಾಮದ ಹೆಸರನ್ನು ಬಿಂಬಿಸುವ ನಾಮಫಲಕವನ್ನು ಮಾಜಿ ಸಚಿವ ಬಿ.ರಮಾನಾಥ ರೈಯವರು ಅನಾವರಣಗೊಳಿಸಿದರು.



ನಾಮಫಲಕವನ್ನು ಮಾಣಿ ಯುವಕ ಮಂಡಲ ಕೊಡುಗೆಯಾಗಿ ನೀಡಿದೆ.ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಸಚಿನ್ ರೈ ಮಾಣಿಗುತ್ತು, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಮಾಣಿ ಯುವಕ ಮಂಡಲದ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ನೇರಳಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕ ನಿರಂಜನ್ ರೈ ಕುರ್ಲೆತ್ತಿಮಾರು, ಬಂಟ್ವಾಳ ಯುವ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷ ಪ್ರಶಾಂತ ಕುಲಾಲ್, ಗ್ರಾಮ ಪಂಚಾಯತ್ ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಕುಶಲ.ಯಂ.ಪೆರಾಜೆ, ರಮಣಿ.ಡಿ.ಪೂಜಾರಿ, ಯುವಕ ಮಂಡಲದ ಪದಾಧಿಕಾರಿಗಳಾದ ಜಗದೀಶ್ ಜೈನ್, ನಾಗರಾಜ ಪೂಜಾರಿ, ದಯಾನಂದ ಪೂಜಾರಿ, ಹಮೀದ್ ಪಲ್ಕೆ, ಗಿರೀಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!