Monday, June 8, 2026
Homeಕರಾವಳಿಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ 'ತುಳು ತುಲಿಪು 2021' ಕಾರ್ಯಕ್ರಮ, ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆ.ಪಿ...

ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ‘ತುಳು ತುಲಿಪು 2021’ ಕಾರ್ಯಕ್ರಮ, ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆ.ಪಿ ಹಾಗೂ ದಿವ್ಯ ಉರುಡುಗ ಭಾಗಿ

- Advertisement -
- Advertisement -

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ಮಿಜಾರಿನ ಕ್ಯಾಂಪಸ್‍ನಲ್ಲಿ ‘ತುಳು ತುಲಿಪು 2021’ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆ.ಪಿ ಹಾಗೂ ದಿವ್ಯ ಉರುಡುಗ ಅತಿಥಿಗಳಾಗಿ ಆಗಮಿಸಿದ್ದರು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅರಂವಿದ್ ಕೆ.ಪಿ ಇವರಿಗೆ ಈ ಸಂಧರ್ಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಸನ್ಮಾನಿಸಲಾಯಿತು.

ಇದೇ ವೇಳೆ ಮೊಸರು ಕಡೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್ ಅಧ್ಯಕ್ಷತೆವಹಿಸಿದ್ದರು. ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್‍ನ ಟ್ರಸ್ಟಿ ವಿವೇಕ್ ಆಳ್ವ, ನಟಿ ದಿವ್ಯಾ ಉರುಡುಗ, ಪ್ರಶಾಂತ್ ಕೆ. ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!