Saturday, April 27, 2024
Homeತಾಜಾ ಸುದ್ದಿತುಮಕೂರು ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣ; 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ತುಮಕೂರು ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣ; 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

spot_img
- Advertisement -
- Advertisement -

ಮಂಗಳೂರು: ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!