Saturday, April 27, 2024
Homeಕರಾವಳಿಬೆಳ್ತಂಗಡಿ : ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ:ಕಾರಿನಲ್ಲಿ ಹೋಗುವಾಗ ಐವತ್ತು ಲಕ್ಷ ಹಣ...

ಬೆಳ್ತಂಗಡಿ : ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ:ಕಾರಿನಲ್ಲಿ ಹೋಗುವಾಗ ಐವತ್ತು ಲಕ್ಷ ಹಣ ತೆಗೆದುಕೊಂಡು ಹೋಗಿದ್ದ ಮೂವರು

spot_img
- Advertisement -
- Advertisement -

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿನಲ್ಲಿ ಮೂವರನ್ನು ಸಜೀವವಾಗಿ ಬೆಂಕಿ ಹಚ್ಚಿ ಕೊಂದ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು ಸಾವನ್ನಪ್ಪಿದ ಮೂವರು ತುಮಕೂರಿಗೆ ತೆರಳುವಾಗ 50 ಲಕ್ಷಕ್ಕೂ ಹೆಚ್ಚು ಹಣ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರಲ್ಲಿ ವಿಚಾರಣೆ ವೇಳೆ ಹೇಳಿದ್ದಾರೆ.

ಸ್ವಂತ ಮನೆ, ಮಗಳ ಚಿನ್ನ ಅಡವಿಟ್ಟು ಹಣ ಜೋಡಣೆ; ನಕಲಿ ಚಿನ್ನದ ಆಸೆಗೆ ಬಿದ್ದಿದ್ದ ಮದಡ್ಕದ ಇಸಾಕ್ ಅದಕ್ಕಾಗಿ ಹಣ ಜೋಡಿಸಲು ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ್ದರು. ಅಲ್ಲದೇ ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಹೆಚ್ಚು ಹಣವನ್ನು ತುಮಕೂರಿಗೆ ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ ತುಮಕೂರಿಗೆ ಹೋಗುವಾಗ 50 ಲಕ್ಷಕ್ಕೂ ಹೆಚ್ಚು ಹಣವಿತ್ತು ಎಂದು ಕುಟುಂಬಸ್ಥರು ಹೇಳಿದ್ದಾರೆ.

ಘಟನೆಯ ವಿವರ;ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!