Wednesday, June 3, 2026
Homeಕರಾವಳಿಬೆಳ್ತಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ ಕಾಡಾನೆ

ಬೆಳ್ತಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ ಕಾಡಾನೆ

- Advertisement -
- Advertisement -

ಬೆಳ್ತಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿ ಪಲ್ಟಿ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದಲ್ಲಿ ನಡೆದಿದೆ.

ಅಲ್ಟೋ ಕಾರು ಸಂಚರಿಸುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿಗೆ ಗಾಯಗಳಾಗಿವೆ.

ನೆರಿಯ ಅಂಚೆ ಕಚೇರಿ ಬಳಿ ಘಟನೆ ನಡೆದಿದ್ದು, ಕಾರು ಜಖಂಗೊಂಡಿದ್ದು ಗಾಯಗೊಂಡವರಿಗೆ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣೆ ಪೊಲೀಸರು ಹಾಗೂ ಬೆಳ್ತಂಗಡಿ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ.

- Advertisement -

Latest News

error: Content is protected !!