ಕೊಡಗು; ಟೀ ಅಂಗಡಿ ಮೇಲೆ ಕಾಡಾನೆ ದಾಳಿ ದಂಪತಿ ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲ ಬಳಿ ನಡೆದಿದೆ.
ಅತ್ತಿಮಂಗಲ ತೋಟದಿಂದ ಮರಿಯೊಂದಿಗೆ ರಸ್ತೆ ದಾಟಿದ ಕಾಡಾನೆ ಪಕ್ಕದಲ್ಲಿದ್ದ ಟೀ ಅಂಗಡಿ ಮೇಲೆ ದಾಳಿ ನಡೆಸಿದೆ. ಅಂಗಡಿಯಲ್ಲಿದ್ದ ತಿಂಡಿ ಪದಾರ್ಥಗಳನ್ನು ಹಾಗೂ ಸಾಮಾಗ್ರಿಗಳನ್ನು ಎಳೆದು ಬಿಸಾಡಿದೆ. ಈ ವೇಳೆ ಅಂಗಡಿಯಲ್ಲಿದ್ದ ಅಂಗಡಿಯಲ್ಲಿದ್ದ ಜಬ್ಬಾರ್ ಹಾಗೂ ಅವರ ಪತ್ನಿ ಕೂದಲೆಳೆ ಅಂತರದಲ್ಲಿ ಎಸ್ಕೇಪ್ ಆಗಿದ್ದಾರೆ.
ಕಾಡಾನೆ ದಾಳಿಯಿಂದ ಪಾರಾಗಲು ಯತ್ನಿಸಿದ ಜಬ್ಬಾರ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಕ್ಕದಲ್ಲಿರುವ ಸಾರ್ವಜನಿಕ ಬಸ್ ನಿಲ್ದಾಣದಲ್ಲಿದ್ದವರು ಕಿರುಚಾಡಿದಾಗ ನಲ್ವತೇಕ್ರೆ ಮಾರ್ಗವಾಗಿ ಕಾಡಾನೆ ದಾಟಿದೆ. ಇದೇ ರಸ್ತೆ ಮಾರ್ಗವಾಗಿ ಬರುತ್ತಿದ್ದ ಕಾರಿನ ಮೇಲೆ ಸಹ ದಾಳಿ ಮಾಡಲಾಗಿದೆ ಎನ್ನಲಾಗಿದೆ.ವಿದ್ಯಾರ್ಥಿಗಳು ಶಾಲೆಗೆ ತೆರಳುವ ಸಮಯವಾಗಿದ್ದರಿಂದ ಸ್ಥಳೀಯರು ಭಯಬೀತರಾಗಿದ್ದಾರೆ. ಕಾಡಾನೆಗಳನ್ನು ಕಾಡಿಗಟ್ಟಬೇಕೆಂದು ಸ್ಥಳೀಯರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.