Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಂದ ಒಂಟಿ ಸಲಗ; ನಿಯಂತ್ರಣ ತಪ್ಪಿ ಚರಂಡಿಗೆ...

ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಂದ ಒಂಟಿ ಸಲಗ; ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

- Advertisement -
- Advertisement -

ಬೆಳ್ತಂಗಡಿ : ಕಳೆದ ಒಂದು ವಾರಗಳಿಂದ ಒಂಟಿ ಸಲಗ ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಂದು ವಾಹನ ಸವಾರರಿಗೆ ತೊಂದರೆ ನೀಡುತ್ತಿದ್ದು ಇದೀಗ ಮತ್ತೆ ರಸ್ತೆಗೆ ಬಂದು ಬೊಲೇರೊ ವಾಹನಕ್ಕೆ ಅಡ್ಡ ಬಂದು ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು‌ ಪ್ರಾಣಾಪಾಯದಿಂದ ಪಾರಾದ ಘಟನೆ ಮೇ.12 ರಂದು(ಇಂದು) ರಾತ್ರಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ  ಒಂದನೇ ತಿರುವಿನಲ್ಲಿ (ಇಂದು)ಮೇ.12 ರಂದು ಭಾನುವಾರ ರಾತ್ರಿ ಒಂಟಿ ಸಲಗ ಮತ್ತೆ ರಸ್ತೆಯಲ್ಲಿ ಪ್ರತ್ಯಕ್ಷವಾಗಿದ್ದು. ಈ ವೇಳೆ ಚಿಕ್ಕಮಗಳೂರಿನಿಂದ ಮಂಗಳೂರು ಕಡೆ ಹೋಗುತ್ತಿದ್ದ ಏರ್ ಟೆಲ್ ಕಂಪನಿಯ ಬೊಲೇರೊ ವಾಹನ ಚಾಲಕ ಮಾಝ್ ಒಂಟಿ ಸಲಗವನ್ನು ನೋಡಿ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದ್ದಿದೆ. ವಾಹನದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಬಂದು ವಾಹನವನ್ನು ಮೇಲಕ್ಕೆತ್ತಿದ್ದಾರೆ.

ಒಂಟಿ ಸಲಗ ಕಳೆದ ಒಂದು ವಾರಗಳಿಂದ ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಂದು ವಾಹನ ಸವಾರರಿಗೆ ತೊಂದರೆ ನೀಡುತ್ತಿದ್ದೆ. ಸ್ಥಳಕ್ಕೆ ಬೆಳ್ತಂಗಡಿ ಅರಣ್ಯ ಇಲಾಖೆಯವರು ದೌಡಾಯಿಸಿದ್ದಾರೆ.

- Advertisement -

Latest News

error: Content is protected !!