Saturday, June 6, 2026
Homeಕರಾವಳಿಉಡುಪಿ: ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿದ್ದ ಟಿವಿ ಶೋ ರೂಂ ಅಗ್ನಿಗೆ ಆಹುತಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿದ್ದ ಟಿವಿ ಶೋ ರೂಂ ಅಗ್ನಿಗೆ ಆಹುತಿ

- Advertisement -
- Advertisement -

ಉಡುಪಿ: ಟಿವಿ ಮತ್ತು ಹೋಂ ಅಪ್ಲೈಯನ್ಸಸ್ ಶೋ ರೂಂ ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.

ತ್ರಾಸಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಸಮೀಪದಲ್ಲಿರುವ ಅಂಬಾ ಶೋರೂಮ್ ನಲ್ಲಿ ತಡರಾತ್ರಿ ಅಗ್ನಿ ಅವಘಡ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು,
ಬೆಂಕಿ ಜ್ವಾಲೆಗೆ ಸುಮಾರು ಒಂದು ಕೋಟಿ ರೂಪಾಯಿಯಷ್ಟು ನಷ್ಟ ಸಂಭವಿಸಿರುವ ಬಗ್ಗೆ ಅಂದಾಜಿಸಲಾಗಿದೆ.

ಒಟ್ಟು 3 ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದ್ದು, ಸ್ಥಳೀಯರು ಮತ್ತು ಪೊಲೀಸರು ಕೂಡಾ ಬೆಂಕಿ ನಂದಿಸಲು ಸಹಕಾರ ನೀಡಿದ್ದಾರೆ.

ಇದೇ ವೇಳೆ, ಶೋ ರೂಂ ಕ್ಯಾಶ್ ಕೌಂಟರ್ ನಲ್ಲಿದ್ದ ಸುಮಾರು ಮೂರು ಲಕ್ಷ ರೂಪಾಯಿ ನಗದು ಕೂಡಾ ಬೆಂಕಿಯಲ್ಲಿ ಸುಟ್ಟು ಹೋಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!