Friday, June 5, 2026
Homeಚಿಕ್ಕಮಗಳೂರುಗಿಚ್ಚಿಗಿಲಿಗಿಲಿ ಖ್ಯಾತಿಯ ಚಂದ್ರಪ್ರಭ ಹಿಟ್ ಆಂಡ್ ರನ್ ಪ್ರಕರಣಕ್ಕೆ ಮಹತ್ವದ ತಿರುವು; ಸಾರ್ ನಾನು ಸುಳ್ಳು...

ಗಿಚ್ಚಿಗಿಲಿಗಿಲಿ ಖ್ಯಾತಿಯ ಚಂದ್ರಪ್ರಭ ಹಿಟ್ ಆಂಡ್ ರನ್ ಪ್ರಕರಣಕ್ಕೆ ಮಹತ್ವದ ತಿರುವು; ಸಾರ್ ನಾನು ಸುಳ್ಳು ಹೇಳಿದೆ ನನ್ನಿಂದ ತಪ್ಪಾಗಿದೆ ಎಂದು ಒಪ್ಪಿಕೊಂಡ ನಟ

- Advertisement -
- Advertisement -

ಚಿಕ್ಕಮಗಳೂರಿನಲ್ಲಿ ನಡೆದ ಗಿಚ್ಚಿಗಿಲಿಗಿಲಿ ಖ್ಯಾತಿಯ ಚಂದ್ರಪ್ರಭ ಹಿಟ್ ಆಂಡ್ ರನ್ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ, ಸಾರ್ ನಾನು ಸುಳ್ಳು ಹೇಳಿದೆ ನನ್ನಿಂದ ತಪ್ಪಾಗಿದೆ ಎಂದು ಕಾಮಿಡಿ ನಟ ಚಂದ್ರಪ್ರಭ ಒಪ್ಪಿಕೊಂಡಿದ್ದಾರೆ.ಅಲ್ಲದೇ ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾರೆ.


ಬೈಕ್​ ಸವಾರ ಕುಡಿದಿದ್ದ ಎಂದು ಹೇಳಿದ್ದೆ. ನನ್ನನ್ನು ಕ್ಷಮಿಸಿ. ಆತ ಕುಡಿದಿರಲಿಲ್ಲ. ನಾನು ಮಾಡಿದ್ದು ತಪ್ಪಾಯ್ತು. ಎಲ್ಲರಿಗೂ ಕ್ಷಮೆ ಕೇಳುತ್ತೇನೆ. ನಾನು ಮತ್ತು ನನ್ನ ಸ್ನೇಹಿತ ಆಸ್ಪತ್ರೆಯವರೆಗೆ ಹೋಗಿದ್ದೆವು. ಆದರೆ ಆಸ್ಪತ್ರೆಗೆ ಸೇರಿಸಲಿಲ್ಲ. ನನಗೆ ಭಯವಾಯಿತು’ ಎಂದು ಚಂದ್ರಪ್ರಭ ಹೇಳಿದ್ದಾರೆ.

ಪೊಲೀಸರ ಸೂಚನೆ ಮೇರೆಗೆ ಇಂದು ಚಿಕ್ಕಮಗಳೂರು ಠಾಣೆಗೆ ಅವರು ಹಾಜರಾಗಿದ್ದಾರೆ. ಈ ವೇಳೆ ಅವರು ತಪ್ಪು ಒಪ್ಪಿಕೊಂಡು ಕಣ್ಣೀರು ಹಾಕಿದ್ದೂ ಅಲ್ಲದೇ, ಅಪಘಾತಕ್ಕೆ ಒಳಗಾದ ಯುವಕನ ಯೋಗಕ್ಷೇಮ ವಿಚಾರಿಸುವುದಾಗಿ ಹೇಳಿದ್ದಾರೆ.

- Advertisement -

Latest News

error: Content is protected !!