Friday, May 3, 2024
Homeಕರಾವಳಿ ಕಾಸರಗೋಡಿನಲ್ಲಿ ಬಿರಿಯಾನಿ ತಿಂದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆಂದು ಆರೋಪ; ರಾಸಾಯನಿಕ ತಪಾಸಣಾ ವರದಿಯಿಂದ ಗೊತ್ತಾಯ್ತು ನಿಜಾಂಶ

 ಕಾಸರಗೋಡಿನಲ್ಲಿ ಬಿರಿಯಾನಿ ತಿಂದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆಂದು ಆರೋಪ; ರಾಸಾಯನಿಕ ತಪಾಸಣಾ ವರದಿಯಿಂದ ಗೊತ್ತಾಯ್ತು ನಿಜಾಂಶ

spot_img
- Advertisement -
- Advertisement -

ಕಾಸರಗೋಡು: ಬಿರಿಯಾನಿ ತಿಂದು ಕಾಸರಗೋಡಿನಲ್ಲಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎಂಬ ಆರೋಪ ಕೆಲವು ದಿನಗಳ ಹಿಂದೆ ಭಾರೀ ಸದ್ದು ಮಾಡಿತ್ತು.ಆದರೆ ಈಗ ವಿದ್ಯಾರ್ಥಿನಿ ಅಂಜುಶ್ರೀ ಸಾವಿಗೆ ಕಾರಣ ಏನು ಅನ್ನೋದು ಗೊತ್ತಾಗಿದೆ.

ಅಂಜುಶ್ರೀ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಸಾಯನಿಕ ವರದಿ ಬಂದಿದ್ದು, ಅಂಜುಶ್ರೀ ಸಾವಿಗೆ ಇಲಿ ಪಾಷಾಣ ಸೇವನೆ ಕಾರಣ ಎಂದು ತಿಳಿದು ಬಂದಿದೆ.
ಮಂಜೇಶ್ವರ ಗೋವಿಂದ ಪೈ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಪೆರುಂಬಳ ಬೇನೂರಿನ ಅಂಜುಶ್ರೀ ಪಾರ್ವತಿ ಕಾಸರಗೋಡು ನಗರ ಹೊರ ವಲಯದ ಹೋಟೆಲೊಂದರಿಂದ ಆನ್‌ಲೈನ್‌ನಲ್ಲಿ ಖರೀದಿಸಿದ್ದ ಆಹಾರ ಸೇವಿಸಿ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿತ್ತು.  ಈ ಬಗ್ಗೆ ಕುಟುಂಬಸ್ಥರು ಮೇಲ್ಪರಂಬ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಇದರಂತೆ ಹೋಟೆಲ್ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಂಡಿದ್ದರು. ಆದರೆ ಆಹಾರದಿಂದ ಸಾವು ಸಂಭವಿಸಿಲ್ಲ ಎಂದು ತನಿಖೆಯಿಂದ ದೃಢಪಟ್ಟಿತ್ತು.

ಘಟನೆ ಬೆಳಕಿಗೆ ಬರ್ತಿದ್ದಂತೆ, ಸಂಬಂಧಪಟ್ಟ ಹೋಟೆಲ್‌ನಲ್ಲಿರುವ ನೀರು ಮತ್ತು ಆಹಾರವನ್ನು ಪರಿಶೀಲಿಸಿದ್ದರು. ಈ ಘಟನೆ ಆರೋಗ್ಯ ಸಚಿವರ ಗಮನಕ್ಕೆ ಬರುತ್ತಿದ್ದಂತೆ ತನಿಖೆಗೆ ಆದೇಶಿಸಲಾಗಿತ್ತು. ಪೊಲೀಸರು ಡೆತ್ ನೋಡ್ ವಶಪಡಿಸಿಕೊಂಡಿದ್ದರು.
ಇದೀಗ ಅಂಜುಶ್ರೀ ಪಾರ್ವತಿಯ ಸಾವಿಗೆ ಇಲಿ ಪಾಷಾಣ ಸೇವನೆ ಕಾರಣ ಎಂದು ರಾಸಾಯನಿಕ ತಪಾಸಣಾ ವರದಿಯಿಂದ ತಿಳಿದು ಬಂದಿದೆ.

- Advertisement -
spot_img

Latest News

error: Content is protected !!