ಬೆಳ್ತಂಗಡಿ; ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ ಪ್ರಕರಣ ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾಗಿತ್ತು. ಇದೀಗ ಸಮಸ್ಯೆಗೆ ಪರಿಹಾರ ಸಿಕ್ಕಿದೆ ಎಂದು ಕುಟುಂಬ ಸ್ಪಷ್ಟಪಡಿಸಿದೆ.
ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ಕೊಲೊದಬೈಲು ಉಮೇಶ್ ಶೆಟ್ಟಿ ಅವರ ಮನೆಯಲ್ಲಿ ಕಳೆದ ಮೂರು ತಿಂಗಳಿನಿಂದ ಪ್ರೇತ ಬಾಧೆ ಇದೆ ಎಂದು ಎಲ್ಲೆಡೆ ಸುದ್ದಿಯಾಗಿತ್ತು. ಪ್ರತಿನಿತ್ಯ ರಾತ್ರಿ ಈ ಮನೆಯ ಕುಟುಂಬ ಸದಸ್ಯರು ವಿಚಿತ್ರ ಅನುಭವಗಳಿಗೆ ಸಾಕ್ಷಿಯಾಗುತ್ತಿದ್ದಾರೆ. ಮನೆಯೊಳಗೆ ಮಲಗಿದಾಗ ಯಾರೋ ಕುತ್ತಿಗೆ ಹಿಸುಕಿದಂತ ಅನುಭವ ಆಗುತ್ತಂತೆ. ಏಕಾಏಕಿ ಮನೆಯೊಳಗೆ ಇರುವ ಸ್ಟೀಲ್ ಲೋಟ, ಪಾತ್ರೆ ಪಗಡೆಗಳು ಚೆಲ್ಲಾಪಿಲ್ಲಿಯಾಗುತ್ತಂತೆ. ಮನೆ ಹೊರಗಿದ್ದ ಬಟ್ಟೆ ಒಳಗೆ ಬಂದು ಆ ಬಟ್ಟೆಗೆ ಬೆಂಕಿ ಹತ್ತಿಕೊಳ್ಳುತ್ತೆ ಅಂತೆಲ್ಲಾ ಹೇಳಲಾಗಿತ್ತು.
ಈ ಸುದ್ದಿ ವೈರಲ್ ಆಗುತ್ತಿದ್ದಂತೆ ನೂರಾರು ಜನರು ಉಮೇಶ್ ಶೆಟ್ಟಿ ಅವರ ಮನೆ ಹತ್ತಿರ ಆಗಮಿಸಿದ್ದರು, ಈ ನಡುವೆ ಇಡೀ ಕುಟುಂಬ ಮನೆ ಬಿಟ್ಟು ತೆರಳಿತ್ತು, ಇದೀಗ ಮರಳಿ ಬಂದಿರುವ ಅವರು ಸಮಸ್ಯೆ ಎಲ್ಲಾ ನಿವಾರಣೆ ಆಗಿದೆ ಎಂದಿದ್ದಾರೆ. ಆದರೆ ಈಗ ಅವೆಲ್ಲ ನಿವಾರಣೆಯಾಗಿದೆ. ನಮ್ಮ ಮನೆಯ ದೈವದ ತೊಂದರೆಯಿಂದ ಹೀಗಾಗುತ್ತಿತ್ತು. ಅದಕ್ಕೆ ಪರಿಹಾರ ಮಾಡಿಕೊಳ್ಳಲಾಗಿದೆ ಅನಂತರ ಯಾವುದೇ ಸಮಸ್ಯೆ ಇಲ್ಲ ಈಗ ಎಲ್ಲಾ ಸರಿಯಾಗಿದೆ ಎಂದು ಮನೆಯವರು ತಿಳಿಸಿದ್ದಾರೆ.
ಬೀಗ ಹಾಕಿದ್ದ ಕಪಾಟಿನಲ್ಲಿದ್ದ ಚಿನ್ನವೂ ನಾಪತ್ತೆಯಾಗಿತ್ತು ಎಂದು ಮನೆಯವರು ಹೇಳಿದ್ದರು. ಆದರೆ ಇದೀಗ ದೇವರ ಫೋಟೋದ ಚಿನ್ನಾಭರಣ ಪತ್ತೆಯಾಗಿದೆ ಎನ್ನಲಾಗಿದೆ.