Thursday, June 4, 2026
Homeಕರಾವಳಿಉಡುಪಿಸಮಾಜ ಸೇವಕ ಲೀಲಾಧರ ಶೆಟ್ಟಿ ಅವರ ಸಾಕು ಮಗಳು ನಾಪತ್ತೆ ಪ್ರಕರಣ; ಆಕೆಯ ಸ್ನೇಹಿತರು ಸೇರಿದಂತೆ...

ಸಮಾಜ ಸೇವಕ ಲೀಲಾಧರ ಶೆಟ್ಟಿ ಅವರ ಸಾಕು ಮಗಳು ನಾಪತ್ತೆ ಪ್ರಕರಣ; ಆಕೆಯ ಸ್ನೇಹಿತರು ಸೇರಿದಂತೆ ನಾಲ್ವರನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಉಡುಪಿ; ಸಮಾಜ ಸೇವಕ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಬರೆದ ಡೆತ್ ನೋಟ್ ಪತ್ತೆಯಾದ ಬೆನ್ನಲ್ಲೇ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿತ್ತು. ದಂಪತಿ ಆತ್ಮಹತ್ಯೆಗೆ ಅವರ ಸಾಕು ಮಗಳು ನಾಪತ್ತೆಯಾದದ್ದೇ ಕಾರಣ ಅನ್ನೋದು ಗೊತ್ತಾಗಿತ್ತು. ಅದರಂತೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಅವರ ಸಾಕು ಮಗಳು ಸ್ನೇಹಿತರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಆಕೆಯ ಸ್ನೇಹಿತ ಶಿರ್ವ ನಿವಾಸಿ ಗಿರೀಶ್ (20) ಮತ್ತು ನಾಪತ್ತೆಯಾಗಲು ಸಹಕರಿಸಿದವರಾದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಬಂಧಿತರು.ನಾಲ್ವರು ಆರೋಪಿಗಳು ಹಾಗೂ ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ

ಲೀಲಾಧರ ಶೆಟ್ಟಿಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದದ್ದರು. ಆಕೆ ಡಿಸೆಂಬರ್ 11 ರಂದು ಮನೆ ಬಿಟ್ಟು ಹೋಗಿದ್ದು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಾಕು ಮಗಳು ನಾಪತ್ತೆಯಾಗಿರುವುದರಿಂದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿ ರವರು ತಾವು ಇಷ್ಟು ದಿನ ಗಳಿಸಿದ್ದ ಗೌರವ, ಮರ್ಯಾದೆಗೆ ಧಕ್ಕೆಯಾಗುತ್ತದೆ ಎಂದು ಮನನೊಂದು ಮನೆಯ ಮಲಗುವ ಕೋಣೆಯಲ್ಲಿನ ಕಬ್ಬಿಣದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

ನಾಪತ್ತೆ ಪ್ರಕರಣವನ್ನು ಭೇದಿಸಲು ಪೋಲಿಸರು ತಂಡಗಳನ್ನು ರಚಿಸಿದ್ದು ಅದರಂತೆ ಸಾಕು ಮಗಳನ್ನು ಪತ್ತೆಹಚ್ಚುವುದರೊಂದಿಗೆ ಹಾಗೂ ಆಕೆಯ ಗೆಳೆಯ ಗೀರೀಶ್ ಮತ್ತು ಆತನ ಇತರ ಮೂವರ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಗಿರೀಶ್ ವಿರುದ್ದ ಪೋಕ್ಸೊ, ಅತ್ಯಾಚಾರ ಹಾಗೂ ಕಿಡ್ನ್ಯಾಪ್ ಪ್ರಕರಣಗಳನ್ನು ಹಾಗೂ ಇತರ ಮೂವರ ವಿರುದ್ದ ಪೋಕ್ಸೊ ಪ್ರಕರಣವನ್ನು ದಾಖಲಿಸಿದ್ದಾರೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದ್ದು ಕಾಪು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ, ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಟಿ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಇವರ ಮಾರ್ಗದರ್ಶನದಲ್ಲಿ ಕಾಪು ಸಿಪಿಐ ಜಯಶ್ರೀ ಮಾನೆ ನೇತೃತ್ವದಲ್ಲಿ ಕಾಪು ಪಿಎಸ್‌ಐ ಅಬ್ದುಲ್ ಖಾದರ್ ಮತ್ತವರ ತಂಡ ಆರೋಪಿಗಳನ್ನು ಬಂಧಿಸಿದೆ.

- Advertisement -

Latest News

error: Content is protected !!