Sunday, June 7, 2026
Homeಕರಾವಳಿಪುಂಜಾಲಕಟ್ಟೆಯಿಂದ  ನಾಪತ್ತೆಯಾಗಿದ್ದ ಬಾಲಕಿ ಉಪ್ಪಿನಂಗಡಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್; ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಪುಂಜಾಲಕಟ್ಟೆಯಿಂದ  ನಾಪತ್ತೆಯಾಗಿದ್ದ ಬಾಲಕಿ ಉಪ್ಪಿನಂಗಡಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್; ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ಉಪ್ಪಿನಂಗಡಿ; ಪುಂಜಾಲಕಟ್ಟೆಯಿಂದ  ನಾಪತ್ತೆಯಾಗಿದ್ದ ಬಾಲಕಿ ಉಪ್ಪಿನಂಗಡಿಯಲ್ಲಿ ಯುವಕನೊಂದಿಗೆ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.  ಅಪ್ರಾಪ್ತ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಲೈಂಗಿಕವಾಗಿ ದೌರ್ಜನ್ಯ ವೆಸಗಿದ ಬಗ್ಗೆ ಸಾಕ್ಷ್ಯವನ್ನು ಆಧರಿಸಿ ಆರೋಪಿ ಮೇಲೆ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.

ಪಾಂಡವರಕಲ್ಲು ನಿವಾಸಿ ನೌಶಾದ್ ಮೇಲೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಪಾಂಡವರಕಲ್ಲು ಎಂಬಲ್ಲಿನ ಹತ್ತನೇ ತರಗತಿ ಬಾಲಕಿಯೋರ್ವಳು ಕಾಣೆಯಾಗಿದ್ದ ಬಗ್ಗೆ ಹೆತ್ತವರು ಪುಂಜಾಲಕಟ್ಟೆ ಪೋಲೀಸ್ ಠಾಣೆ ಮೊದಲು ದೂರು ನೀಡಿದ್ದು, ಕಿಡ್ನಾಪ್ ಪ್ರಕರಣ ದಾಖಲಾಗಿತ್ತು. ಬಳಿಕ ಆಕೆ ನೆರೆಮನೆಯ ನೌಶಾದ್ ಜೊತೆ ಪತ್ತೆಯಾಗಿದ್ದಳು.

ಇದೀಗ ವೈದ್ಯಕೀಯ ರಿಪೋರ್ಟ್ ಆಧರಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯದ ಬಗ್ಗೆ ವೈದ್ಯರು ವರದಿ ನೀಡಿದ್ದಾರೆ. ಈ ವರದಿಯನ್ನು ಆಧರಿಸಿ ಪುಂಜಾಲಕಟ್ಟೆ ಪೋಲಿಸರು ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

- Advertisement -

Latest News

error: Content is protected !!