Wednesday, June 3, 2026
Homeಕರಾವಳಿಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸೆಪ್ಟೆಂಬರ್ 2022ರ ವೇಳೆಗೆ ಎರಡು ಹೆಚ್ಚುವರಿ ಪ್ಲಾಟ್‌ಫಾರ್ಮ್‌ ನಿರ್ಮಾಣ !

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸೆಪ್ಟೆಂಬರ್ 2022ರ ವೇಳೆಗೆ ಎರಡು ಹೆಚ್ಚುವರಿ ಪ್ಲಾಟ್‌ಫಾರ್ಮ್‌ ನಿರ್ಮಾಣ !

- Advertisement -
- Advertisement -

ಮಂಗಳೂರು: ಮುಂದಿನ ವರ್ಷ ಸೆಪ್ಟೆಂಬರ್‌ ವೇಳೆಗೆ ನಾಲ್ಕು ಮತ್ತು ಐದನೇ ಪ್ಲಾಟ್‌ಫಾರ್ಮ್‌ಗಳು ಕಾರ್ಯಾರಂಭ ಮಾಡಲಿದೆ. ಆಗ ಕೇಂದ್ರ ನಿಲ್ದಾಣದಲ್ಲಿ ರೈಲ್ವೆ ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಎಂದು ದಕ್ಷಿಣ ರೈಲ್ವೆ ಜನರಲ್ ಮ್ಯಾನೇಜರ್ ಜಾನ್ ಥಾಮಸ್ ಹೇಳಿದ್ದಾರೆ.

ಥಾಮಸ್ ಅವರು ಇಲ್ಲಿನ ಕೇಂದ್ರ ರೈಲು ನಿಲ್ದಾಣಕ್ಕೆ ಭೇಟಿ ನೀಡಿದರು ಮತ್ತು ರೈಲ್ವೆ ವ್ಯವಸ್ಥೆಗಳು ಮತ್ತು ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದರು. ಕೇಂದ್ರ ನಿಲ್ದಾಣದಲ್ಲಿ ಪಿಟ್ ಲೈನ್ ಕಾಮಗಾರಿ ಪ್ರಗತಿಯಲ್ಲಿದ್ದು ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ನಂತರ ಹೊಸ ಪ್ಲಾಟ್‌ಫಾರ್ಮ್‌ಗಳ ಕಾಮಗಾರಿಯನ್ನು ಆರು ತಿಂಗಳ ಅವಧಿಯಲ್ಲಿ ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗುವುದು. ಈಗಾಗಲೇ ಅನುದಾನ ಬಿಡುಗಡೆಯಾಗಿದ್ದು, ಗುತ್ತಿಗೆ ಆಧಾರದ ಮೇಲೆ ಕಾಮಗಾರಿ ವಹಿಸಲಾಗಿದೆ ಎಂದರು.

ಹೊಸ ಪ್ಲಾಟ್‌ಫಾರ್ಮ್‌ಗಳು ಜಿಲ್ಲೆಯ ಜನರ ಬೇಡಿಕೆಗಳಿಗೆ ಅನುಗುಣವಾಗಿ ಈ ನಿಲ್ದಾಣದಿಂದ ಹೆಚ್ಚಿನ ರೈಲುಗಳನ್ನು ಓಡಿಸಲು ದಾರಿ ಮಾಡಿಕೊಡುತ್ತವೆ ಎಂದು ಅವರು ಹೇಳಿದರು. ಪಾಲಕ್ಕಾಡ್‌ನ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ತ್ರಿಲೋಕ್ ಕೊಠಾರಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿ ಸದಸ್ಯರು ಕೇಂದ್ರ ನಿಲ್ದಾಣದವರೆಗೆ ಗೋಮಟೇಶ್ವರ ಎಕ್ಸ್‌ಪ್ರೆಸ್ ಹಗಲು ರೈಲು ಓಡಾಟ, ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರಸ್ತೆಯವರೆಗೆ ವಿಸ್ತರಿಸುವಂತೆ ಕೋರಿ ಥಾಮಸ್ ಅವರಿಗೆ ಮನವಿ ಸಲ್ಲಿಸಿದರು. ಮುಂಬೈ ಸಿಎಸ್‌ಟಿ ಎಕ್ಸ್‌ಪ್ರೆಸ್ ರೈಲನ್ನು ಕೇಂದ್ರ ನಿಲ್ದಾಣಕ್ಕೆ ವಿಸ್ತರಿಸುವುದು, ಮಂಗಳೂರು ಜಂಕ್ಷನ್‌ನಲ್ಲಿ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿಗೆ ನಿಲುಗಡೆ ನೀಡುವುದು ಇತ್ಯಾದಿ ಬೇಡಿಕೆಗಳನ್ನು ಪರಿಗಣಿಸುವುದಾಗಿ ಪ್ರಧಾನ ವ್ಯವಸ್ಥಾಪಕರು ಭರವಸೆ ನೀಡಿದರು.

ರೈಲ್ವೆ ಗ್ರಾಹಕರ ಸಲಹಾ ಸಮಿತಿಯ ಸದಸ್ಯರಾದ ಹನುಮಂತ ಕಾಮತ್ ಮತ್ತು ಅಹಮದ್ ಬಾವ, ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿಯ ಅನಿಲ್ ಹೆಗ್ಡೆ ಮತ್ತು ಜಿ ಕೆ ಭಟ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!