Friday, June 5, 2026
Homeಕರಾವಳಿಉಡುಪಿಕುಂದಾಪುರ: ರಾಘವೇಂದ್ರ ಶೇರಿಗಾರ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಅರೆಸ್ಟ್

ಕುಂದಾಪುರ: ರಾಘವೇಂದ್ರ ಶೇರಿಗಾರ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಅರೆಸ್ಟ್

- Advertisement -
- Advertisement -

ಕುಂದಾಪುರ: ಕುಂದಾಪುರದಲ್ಲಿ ನಡೆದಿದ್ದ ರಾಘವೇಂದ್ರ ಶೇರಿಗಾರ್ ಅಲಿಯಾಸ್ ಬನ್ಸ್ ರಾಘ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಮೂಲದ ಶಫಿವುಲ್ಲಾ (40) ಇಮ್ರಾನ್ (43) ಬಂಧಿತ ಆರೋಪಿಗಳಾಗಿದ್ದಾರೆ.ಅಕ್ಟೋಬರ್ 1 ರಂದು ಸಂಜೆ ಕುಂದಾಪುರದ ಚಿಕ್ಕನ್ ಸಾಲ್ ರಸ್ತೆಯಲ್ಲಿ ರಾಘವೇಂದ್ರ ಅವರಿಗೆ ಚಾಕುವಿನಿಂದ ಇರಿಯಲಾಗಿತ್ತು‌.

ಇರಿತದಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ರಾಘವೇಂದ್ರ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಬಳಿಕ ಮೃತಪಟ್ಟಿದ್ದರು.ಚಾಕು ಇರಿದು ಶಿವಮೊಗ್ಗದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿಗಳನ್ನು ಕುಂದಾಪುರ ಹೆಚ್ಚುವರಿ ಸಿವಿಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದ್ದಾರೆ.

- Advertisement -

Latest News

error: Content is protected !!