Thursday, June 25, 2026
Homeಕರಾವಳಿಉಡುಪಿಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡ ಇಬ್ಬರ ಬಂಧನ

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡ ಇಬ್ಬರ ಬಂಧನ

- Advertisement -
- Advertisement -

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡು ಆತಂಕದ ವಾತಾವರಣ ನಿರ್ಮಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಉಡುಪಿ ನಗರದ ಕೋರ್ಟ್ ರಸ್ತೆಯ ತುಳುನಾಡು ಟವರ್ಸ್ ಎಕ್ಸಿಸ್ ಬ್ಯಾಂಕ್‌ನ ಎಟಿಎಂ ಎದುರು ನಡೆದಿದೆ. ಬಾಲಾಜಿ ಹಾಗೂ ಆಶ್ರಫ್ ಸಾಹೇಬ್ ಬಂಧಿತ ಆರೋಪಿಗಳು.

ಆರೋಪಿಗಳು ಮಧ್ಯಾಹ್ನ ವೇಳೆ ಪರಸ್ಪರ ಹೊಡೆದಾಡಿಕೊಂಡು ಭಯ ಹಾಗೂ ಪ್ರಕ್ಷುಬ್ದ ವಾತಾವರಣ ಉಂಟು ಮಾಡಿದ ಆರೋಪದಲ್ಲಿ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ

- Advertisement -

Latest News

error: Content is protected !!