Monday, August 10, 2026
HomeUncategorizedಮಂಗಳೂರು:  ತಲವಾರು ಹಿಡಿದು ಬೆದರಿಕೆ ಹಾಕುತ್ತಿದ್ದ ಇಬ್ಬರ ಬಂಧನ

ಮಂಗಳೂರು:  ತಲವಾರು ಹಿಡಿದು ಬೆದರಿಕೆ ಹಾಕುತ್ತಿದ್ದ ಇಬ್ಬರ ಬಂಧನ

- Advertisement -
- Advertisement -

ಮಂಗಳೂರು: ತೊಕ್ಕೊಟ್ಟಿನ ಬಾರ್ ಒಂದರ ಬಳಿ ಮದ್ಯದ ಅಮಲಿನಲ್ಲಿ ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಒಡ್ಡುತ್ತಿದ್ದ ಇಬ್ಬರು ಪುಂಡರನ್ನು ಉಳ್ಳಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಉಳ್ಳಾಲದ ಮಾರ್ಗತಲೆಯ ಮೊಹಮ್ಮದ್ ಶಾಕಿರ್ (31) ಹಾಗೂ ಮಂಚಿಲ ನಿವಾಸಿ, ರೌಡಿಶೀಟರ್ ಅಶ್ಪಕ್ (28) ಬಂಧಿತ ಆರೋಪಿಗಳು.

ಶನಿವಾರ ತಡರಾತ್ರಿ 12.15ರ ಸುಮಾರಿಗೆ ತೊಕ್ಕೊಟ್ಟಿನಲ್ಲಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾಗ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಸೇರಿದಂತೆ ವಿವಿಧ ಕಠಿಣ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!