Monday, May 13, 2024
Homeಕರಾವಳಿಮಂಗಳೂರು:ರಸ್ತೆಯಲ್ಲಿ ನಡೆದುಕೊಂಡು ಹೋಗುವ ಮಕ್ಕಳನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಇಬ್ಬರ ಬಂಧನ; ಫೋನ್ ಇನ್ ಕಾರ್ಯಕ್ರಮದಲ್ಲಿ...

ಮಂಗಳೂರು:ರಸ್ತೆಯಲ್ಲಿ ನಡೆದುಕೊಂಡು ಹೋಗುವ ಮಕ್ಕಳನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಇಬ್ಬರ ಬಂಧನ; ಫೋನ್ ಇನ್ ಕಾರ್ಯಕ್ರಮದಲ್ಲಿ ದೂರು ಕೊಟ್ಟ ಕೆಲವೇ ಗಂಟೆಗಳಲ್ಲಿ ಆರೋಪಿಗಳು ಅರೆಸ್ಟ್

spot_img
- Advertisement -
- Advertisement -

ಮಂಗಳೂರು:ರಸ್ತೆಯಲ್ಲಿ ನಡೆದುಕೊಂಡು ಹೋಗುವ ಮಕ್ಕಳನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಇಬ್ಬರು

ತಳ್ಳುಗಾಡಿ ಕೆಲಸಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಅತ್ತಾವರ ಬಳಿ ತಳ್ಳುಗಾಡಿಯಲ್ಲಿ ಕೆಲಸ ಮಾಡುತ್ತಿದ್ದ ಅಮರ್ ಮತ್ತು ಸೂರಜ್ ಬಂಧಿತ ಆರೋಪಿಗಳು.

ಶನಿವಾರ ಮಂಗಳೂರು ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ಪೊಲೀಸ್ ಫೋನ್ ಇನ್ ಕಾರ್ಯಕ್ರಮವು ನಡೆದಿತ್ತು. ಈ ವೇಳೆ 56  ವರ್ಷದ ವ್ಯಕ್ತಿಯೊಬ್ಬರು ಕರೆ ಮಾಡಿ  ಅತ್ತಾವರದಲ್ಲಿ ನನ್ನ ಮಕ್ಕಳು ನಡೆದುಕೊಂಡು ಹೋಗುವಾಗ ತಳ್ಳುಗಾಡಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಯುವಕರು ಅವರನ್ನು ಹಿಂಬಾಲಿಸಿಕೊಂಡು ಹೋಗಿ ಕೆಟ್ಟ ದೃಷ್ಟಿಯಿಂದ ನೋಡುತ್ತಾರೆ’ ಎಂದು ದೂರು ನೀಡಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರು ಮಂಗಳೂರು ಕೇಂದ್ರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದಾರೆ. ಅದರಂತೆ ಕೆಲವೇ ಗಂಟೆಯೊಳಗೆ ಆರೋಪಿಗಳಾದ ಅಮರ್ ಮತ್ತು ಸೂರಜ್‌ರನ್ನು ವಶಕ್ಕೆ ಪಡೆದಿದ್ದಾರೆ. ಮಹಿಳಾ ಠಾಣೆಯ ಇನ್‌ಸ್ಪೆಕ್ಟರ್ ಲೋಕೇಶ್ ಎ.ಸಿ. ಅವರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದರಲ್ಲದೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ‘ಪೊಲೀಸ್ ಫೋನ್ ಕಾರ್ಯಕ್ರಮ’ದಲ್ಲಿ ಸಮಸ್ಯೆ ಹೇಳಿಕೊಂಡ ಕೆಲವೇ ಗಂಟೆಯೊಳಗೆ ಸ್ಪಂದಿಸಿರುವ ಪೊಲೀಸ್ ಆಯುಕ್ತರ ಕ್ರಮಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

- Advertisement -
spot_img

Latest News

error: Content is protected !!