- Advertisement -
- Advertisement -
ಉಡುಪಿ: ಪಿಂಚಣಿ ಹಣ ನೀಡಲು ಲಂಚ ಕೇಳಿದ ಖಜಾನೆ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಖಜಾನೆ ಇಲಾಖೆಯ ಉಪನಿರ್ದೇಶಕ ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ನಿವೃತ್ತ ಶಿಕ್ಷಕರೊಬ್ಬರಿಗೆ ಪಿಂಚಣಿ ಹಣ ಬಿಡುಗಡೆಗೊಳಿಸಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ನಡೆದಿದೆ.
ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಅವರಿಗೆ ಪಿಂಚಣಿ ಹಣ ನೀಡಲು ಐದು ತಿಂಗಳುಗಳಿಂದ ಉಪನಿರ್ದೇಶಕ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ಸತಾಯಿಸುತ್ತಿದ್ದರು ಎನ್ನಲಾಗಿದೆ.
ಇಂದು ಐದು ಸಾವಿರ ರೂಪಾಯಿ ಲಂಚ ನೀಡುವಂತೆ ಒತ್ತಾಯ ಮಾಡಿದ್ದ ಹಿನ್ನೆಲೆಯಲ್ಲಿ ಹಿತೇಂದ್ರ ಭಂಡಾರಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಹೀಗಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
- Advertisement -